ಮುಂಬೈ: ಕಾಲಿನಲ್ಲಿ ತೀವ್ರ ನೋವು ಕಾಣಿಸಿಕೊಂಡ ಕಾರಣ ಬಾಲಿವುಡ್ ಸ್ಟಾರ್ ರಣದೀಪ್ ಹೂಡಾ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಶಸ್ತ್ರಚಿಕಿತ್ಸೆಗೆ ಒಳಗಾಗುವುದಕ್ಕೂ ಮುನ್ನ ಹೂಡಾ ಅವರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಆದರೆ ಇದೀಗ ವರದಿ ನೆಗೆಟಿವ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಅವರ ತಂದೆ ರಣಬೀರ್, ಆದಷ್ಟು ಬೇಗ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದೆ.
ಹೂಡಾ, ಮೊಟ್ಟ ಮೊದಲ ಬಾರಿಗೆ ಹಾಲಿವುಡ್ ಆ್ಯಕ್ಷನ್ ಸಿನಿಮಾದಲ್ಲಿ ನಟನೆ ಮಾಡುವ ಅವಕಾಶ ಗಿಟ್ಟಿಸಿಕೊಂಡಿದ್ದರು. ನೆಟ್ಫ್ಲಿಕ್ಸ್ ಸಂಸ್ಥೆಯು ಎಕ್ಸ್ಟ್ರಾಕ್ಷನ್ ಎಂಬ ಸಿನಿಮಾದಲ್ಲಿ ಇವರು ನಟಿಸಿದ್ದರು.