ಕೋಲ್ಕತ್ತಾ ರೈಲ್ವೆ ನಿಲ್ದಾಣದಲ್ಲಿ ಹಾಡು ಹೇಳುತ್ತಿದ್ದ ಗಾನ ಕೋಗಿಲೆ ರಾನು ಕಂಠಕ್ಕೆ ಈಗ ಬಂಗಾರದ ಬೆಲೆ ಬಂದಿದೆ. ಬಾಲಿವುಡ್ ಗಾಯಕ, ಸಂಗೀತ ನಿರ್ದೇಶಕ ಹಿಮೇಶ್ ರೇಷ್ಮಿಯಾ ತಮ್ಮ ಚಿತ್ರದಲ್ಲಿ ಹಾಡಲು ಅವಕಾಶ ನೀಡಿದ್ದರು. ಈ ಹಾಡಿನ ಸಣ್ಣ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿತು. ಈ ಹಾಡಿಗೆ ಸಿಕ್ಕ ರೆಸ್ಪಾನ್ಸ್ ನೋಡಿರುವ ಹಿಮೇಶ್, ತಮ್ಮ ಚಿತ್ರದ ಮತ್ತೊಂದು ಹಾಡನ್ನು ರಾನು ಮಂಡಲ್ ಅವರಿಂದ ಹಾಡಿಸಿದ್ದಾರೆ. ಈ ಹಾಡಿನ ರೆಕಾರ್ಡ್ ನಿನ್ನೆ ಮುಗಿದಿದೆ.
ಇನ್ನು, ರಾನು ಅವರಿಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಕೂಡ ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.