1983ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ‘83’ ಸಿನಿಮಾ ತಯಾರಾಗಿದೆ. ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ತೆರೆ ಮೇಲೆ ಮಿಂಚಲಿದ್ದಾರೆ. ಚಿತ್ರದಲ್ಲಿ ಕಪಿಲ್ ದೇವ್ ಅವರ ಪತ್ನಿ ರೋಮಿಯಾಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ. ಕಬೀರ್ ಖಾನ್ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಜಗತ್ತಿನ ಅತಿ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾದಲ್ಲಿ ಕಪಿಲ್ ದೇವ್ ಪಾತ್ರದಲ್ಲಿರುವ ರಣವೀರ್ ಸಿಂಗ್ ಚಿತ್ರವನ್ನು ಪ್ರದರ್ಶಿಸಲಾಯಿತು. ಈ ದೃಶ್ಯವನ್ನು ನೋಡಿ ಚಿತ್ರತಂಡ ಆನಂದಿಸಿದೆ. ನಟ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಬೀರ್ ಮತ್ತು ಅವರ ಪತ್ನಿ ಮಿನಿ ಮಾಥುರ್ ಸೇರಿದಂತೆ '83' ತಂಡವು ಬುರ್ಜ್ ಖಲೀಫಾದಲ್ಲಿ ಕಪಿಲ್ ದೇವ್ ಪಾತ್ರದಲ್ಲಿನ ರಣವೀರ್ ಚಿತ್ರವನ್ನು ವೀಕ್ಷಿಸಿದ್ದಾರೆ. ಇನ್ನು ಸ್ಕ್ರೀನಿಂಗ್ ಸಮಯದಲ್ಲಿ ದೀಪಿಕಾ ತನ್ನ ಪತಿಯನ್ನು ಮುದ್ದಾಗಿ ನೋಡುತ್ತಿದ್ದ ದೃಶ್ಯ ಎಲ್ಲರ ಗಮನ ಸೆಳೆದಿದೆ.
ಇದನ್ನೂ ಓದಿ: '83' teaser out: 'ಭಾರತದ ದೊಡ್ಡ ಗೆಲುವಿನ ಹಿಂದಿರುವ ಕಥೆ' ಹೇಳಲಿದ್ದಾರೆ ರಣವೀರ್
ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ '83' ಸಿನಿಮಾ ಡಿಸೆಂಬರ್ 24ರಂದು ತೆರೆ ಕಾಣಲಿದೆ. ರಣವೀರ್, ದೀಪಿಕಾ ಸೇರಿದಂತೆ ಚಿತ್ರತಂಡ ಸೌದಿ ಅರೇಬಿಯಾದ ಜೆಡ್ಡಾಗೆ ತೆರಳಿ ಚಿತ್ರದ ಪ್ರಚಾರ ಕಾರ್ಯಕ್ರಮವನ್ನು ಕೈಗೊಂಡಿದೆ.