ಹೈದರಾಬಾದ್ : ಬಾಲಿವುಡ್‌ನ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ರಾಜಸ್ಥಾನದ ರಣತಂಬೋರ್ನಲ್ಲಿ ಹೊಸ ವರ್ಷ 2021 ಸ್ವಾಗತಿಸಿದರು.
ರಣತಂಬೋರ್ಗೆ ತೆರಳಿರುವ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅಲ್ಲಿನ ಅರಣ್ಯ ಪ್ರದೇಶವನ್ನು ವೀಕ್ಷಿಸುತ್ತಿದ್ದಾರೆ. ಜೊತೆಗೆ ಹೊಸ ವರ್ಷದ ದಿನದಂದು ಸೂರ್ಯೋದಯ ಫೋಟೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
- " class="align-text-top noRightClick twitterSection" data="
">
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅವರು ಸಹ ಕುಟುಂಬ ಸಮೇತರಾಗಿ ಹೊಸ ವರ್ಷಾಚರಣೆಗೆ ರಣತಂಬೋರ್ಗೆ ತೆರಳಿದ್ದಾರೆ. ಕಾಕತಾಳೀಯವೆಂಬಂತೆ ಈ ಸ್ಟಾರ್ ಜೊಡಿ ಸಹ ರಾಜಸ್ಥಾನಕ್ಕೆ ಭೇಟಿ ನೀಡಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಇನ್ನು ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿ ಬಂದ ನಂತರ ಕೊಂಚ ಸಮಯ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರದ ನಟಿ ದೀಪಿಕಾ, ಇದೀಗ ಸಹಜ ಸ್ಥಿತಿಗೆ ಮರಳಿದ್ದಾರೆ.