ETV Bharat / sitara

ಸುಶಾಂತ್​ ಸಿಂಗ್ ಸಾವು ಪ್ರಕರಣ​: ನಟಿ ರಿಯಾ ಚಕ್ರವರ್ತಿ ಅರೆಸ್ಟ್​ - ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್​

ಸುಶಾಂತ್​ ಸಿಂಗ್ ರಜಪೂತ್​ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ನಟಿ ರಿಯಾ ಚಕ್ರವರ್ತಿಯನ್ನು ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್​​ಸಿಬಿ) ಬಂಧಿಸಿದೆ.

Rhea Chakraborty arrested by NCB
ನಟಿ ರಿಯಾ ಚಕ್ರವರ್ತಿ ಅರೆಸ್ಟ್​
author img

By

Published : Sep 8, 2020, 4:33 PM IST

ಮುಂಬೈ: ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್​ ಅಸಹಜ ಸಾವಿನ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿನ ಆರೋಪದಡಿ ನಟಿ ರಿಯಾ ಚಕ್ರವರ್ತಿಯನ್ನು ಎನ್​​ಸಿಬಿ ಬಂಧಿಸಿದೆ.

ಸುಶಾಂತ್ ಸಾವಿನ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಭೇದಿಸಲಾಗುತ್ತಿದ್ದು, ಡ್ರಗ್ಸ್ ಲಿಂಕ್ ಕುರಿತ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಕಳೆದ ಮೂರು ದಿನಗಳಿಂದ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್​​ಸಿಬಿ) ರಿಯಾ ಚಕ್ರವರ್ತಿಯ ವಿಚಾರಣೆ ನಡೆಸುತ್ತಿದೆ. ಇಂದೂ ಕೂಡ ಬೆಳಗ್ಗೆಯಿಂದ ನಟಿಯನ್ನು ವಿಚಾರಣೆಗೊಳಪಡಿಸಿದ್ದ ಎನ್​​ಸಿಬಿ ಅಧಿಕಾರಿಗಳು ಇದೀಗ ಬಂಧಿಸಿದ್ದಾರೆ.

ಮಾದಕ ವಸ್ತು ನಿಯಂತ್ರಣ ಕಾಯ್ದೆ (NDPS) ಸೇರಿ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ರಿಯಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ರಿಯಾರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಲಾಗುವುದು ಹಾಗೂ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಮ್ಯಾಜಿಸ್ಟ್ರೇಟ್​ ಕೋರ್ಟ್​ ಎದುರು ಹಾಜರು ಪಡಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.