ETV Bharat / sitara

ಸುಶಾಂತ್ ತಂದೆ ಎಫ್​ಐಆರ್​ನಲ್ಲಿ ನನ್ನನ್ನು ತಪ್ಪಾಗಿ ಸೂಚಿಸಿದ್ದಾರೆ: ಸುಪ್ರೀಂಗೆ ರಿಯಾ ಅರ್ಜಿ - ಸುಪ್ರೀಂ ಕೋರ್ಟ್‌ಗೆ ತೆರಳಿದ ರಿಯಾ ಚಕ್ರವರ್ತಿ

ಸುಶಾಂತ್ ಅವರ ತಂದೆ ಕೆ.ಕೆ. ಸಿಂಗ್ ಇತ್ತೀಚೆಗೆ ಪಾಟ್ನಾದಲ್ಲಿ ಎಫ್ಐಆರ್ ದಾಖಲಿಸಿದ್ದು, ಅದರ ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

rhea
rhea
author img

By

Published : Jul 31, 2020, 10:01 AM IST

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಬಿಹಾರದಲ್ಲಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಸುಶಾಂತ್ ಅವರ ತಂದೆ ಕೆ.ಕೆ. ಸಿಂಗ್ ಇತ್ತೀಚೆಗೆ ಪಾಟ್ನಾದಲ್ಲಿ ಎಫ್ಐಆರ್ ದಾಖಲಿಸಿದ್ದು, ಅದರಲ್ಲಿ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಜನರ ಕಾರಣದಿಂದ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ತೆರಳಿದ ರಿಯಾ, ನನಗೂ ಅನೇಕ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ. ಸುಶಾಂತ್ ಸಾವಿನಿಂದಾಗಿ ನಾನು ಕೂಡಾ ತೀವ್ರ ಆಘಾತಕ್ಕೊಳಗಾಗಿದ್ದೇನೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಅವರು ತಿಳಿಸಿದ್ದಾರೆ.

ಸುಶಾಂತ್ ತಂದೆ ಎಫ್​ಐಆರ್​ನಲ್ಲಿ ನನ್ನನ್ನು ತಪ್ಪಾಗಿ ಸೂಚಿಸಿದ್ದಾರೆ ಎಂದು ರಿಯಾ ಚಕ್ರವರ್ತಿ ಹೇಳಿದ್ದಾರೆ. ಜೂನ್ 8ರವರೆಗೆ ತಾನು ಸುಶಾಂತ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದೆ ಎಂದು ರಿಯಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.