ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಮತ್ತು ಕಾಜೋಲ್ ಇತ್ತೀಚೆಗೆ ಮುಂಬೈನ ಮೆಹಬೂಬ್ ಸ್ಟುಡಿಯೋದ ಹೊರಗೆ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಇವರಿಬ್ಬರು ಯಾವಾಗಲೂ ಉತ್ತಮ ಸ್ನೇಹಿತರಾಗಿದ್ದು, ಕಭಿ ಖುಷಿ ಕಭಿ ಗಮ್ ಸೇರಿದಂತೆ ಇತರ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ಅವರ ಇತ್ತೀಚಿನ ಭೇಟಿಯ ಸಮಯದಲ್ಲಿ, ಅವರು ಸಂಕ್ಷಿಪ್ತ ಸಂಭಾಷಣೆ ನಡೆಸಿದರು. ಕರೀನಾ ಅವರ ಮಗು, ಕೋವಿಡ್ ಮತ್ತು ಅವರ ಆರೋಗ್ಯದ ಬಗ್ಗೆ ಹೆಚ್ಚು ಮಾತನಾಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪಾಪರಾಜಿಗಳು ಸಂಪೂರ್ಣ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದಾರೆ.
ಇದನ್ನೂ ಓದಿ: ಪಠಾಣ್ ಚಿತ್ರದ ಚಿತ್ರೀಕರಣಕ್ಕೆ ಸ್ಪೇನ್ಗೆ ತೆರಳಿದ ಶಾರೂಖ್ ಖಾನ್