ಮುಂಬೈ: ವಿಶೇಷ ವಿಡಿಯೋ ಹಂಚಿಕೊಳ್ಳುವ ಮೂಲಕ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಇನ್ಸ್ಟಾಗ್ರಾಮ್ 20 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಈ ಅಮೂಲ್ಯವಾದ ಕ್ಷಣವನ್ನು ವಿಡಿಯೋದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಶಿಲ್ಪಾ ಶೆಟ್ಟಿ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವ ಮೂಲಕ ವಿಭಿನ್ನ ಹಾಗೂ ವಿಶೇಷವಾದ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಮೆಚ್ಚುಗೆ ಪಡೆದಿದ್ದರು. ಶಿಲ್ಪಾ ಹೆಚ್ಚಾಗಿ ಯೋಗದಲ್ಲಿ ಆಸಕ್ತಿ ಹೊಂದಿದ್ದು, ದೇಹದ ಆರೋಗ್ಯ ಮತ್ತು ಫಿಟ್ನೆಸ್ ಕಡೆಗೆ ಹೆಚ್ಚಿನ ಗಮನ ಹರಿಸುತ್ತಾರೆ. ಇನ್ನು ಇನ್ಸ್ಟಾಗ್ರಾಮ್ನಲ್ಲಿ 20 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
'ನಿಮ್ಮೆಲ್ಲರಿಂದ ನಿರಂತರವಾಗಿ ತುಂಬಾ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತಿದ್ದೇನೆ. ಇದಕ್ಕೆ ಧನ್ಯವಾದಗಳು. ಇದಕ್ಕೆಲ್ಲ ನನ್ನ ಅದ್ಭುತ ಕುಟುಂಬದ ಸಹಕಾರವೇ ಕಾರಣ. ನಾನು ಇಲ್ಲಿದ್ದೇನೆ ಎಂದರೆ ನಿಮ್ಮ ಪ್ರೀತಿಯೇ ಕಾರಣ. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ' ಎಂದು ಬರೆದಿದ್ದಾರೆ.
ಸದ್ಯ ಶಿಲ್ಪಾ ಹಂಗಾಮ-2 ಮತ್ತು ನಿಕಮ್ಮ ಸಿನಿಮಾದಲ್ಲಿ ನಟಿಸುತ್ತಿದ್ದು, ಚಿತ್ರದ ಚಿತ್ರೀಕಣದಲ್ಲಿ ಬ್ಯೂಸಿಯಾಗಿದ್ದಾರೆ.