ಜಮ್ಮು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬುಧವಾರದಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪವಿತ್ರ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದರು.
ದೇಗುಲದ ಬೇಸ್ ಕ್ಯಾಂಪ್‌ಗೆ ಬಂದು, ಬಳಿಕ ಪೊಲೀಸ್ ಸಿಬ್ಬಂದಿಯೊಂದಿಗೆ ಕುದುರೆಯ ಮೇಲೆ ಏರಿ ದೇಗುಲಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ಸಮಯದಲ್ಲಿ ಅವರು 'ಜೈ ಮಾತಾ' ಎಂದು ಜಪಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿಲ್ಪಾ ಶೆಟ್ಟಿ, ನಾನು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ. ದೇವಿಯ ಆಜ್ಞೆ ಮೇರೆಗೆ ನಾನು ಅವಳಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದರು.