ETV Bharat / sitara

400ಕ್ಕೂ ಹೆಚ್ಚು ವಲಸಿಗ ಕುಟುಂಬಗಳಿಗೆ ಆರ್ಥಿಕ ನೆರವು: ಸೋನು ಸೂದ್ ಘೋಷಣೆ

ಲಾಕ್​​ಡೌನ್​ನಿಂದಾಗಿ ಮೃತಪಟ್ಟಿರುವ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಹೇಳಿದ್ದಾರೆ. ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ವಲಸಿಗರಿಗೆ ಸಂಬಂಧಿಸಿದ ಮಾಹಿತಿ, ವಿಳಾಸ ಮತ್ತು ಬ್ಯಾಂಕ್ ವಿವರಗಳನ್ನು ಪಡೆದುಕೊಂಡರು.

sonu sood
sonu sood
author img

By

Published : Jul 13, 2020, 2:47 PM IST

ಮುಂಬೈ: ಕೊರೊನಾ ವೈರಸ್ ಪ್ರೇರಿತ ರಾಷ್ಟ್ರವ್ಯಾಪಿ ಲಾಕ್​​ಡೌನ್​ನಿಂದಾಗಿ ಮೃತಪಟ್ಟಿರುವ ಮತ್ತು ಗಾಯಗೊಂಡಿರುವ ವಲಸೆ ಕಾರ್ಮಿಕರ 400ಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ನಟ ಸೋನು ಸೂದ್ ಹೇಳಿದ್ದಾರೆ.

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ವಲಸಿಗರಿಗೆ ಸಂಬಂಧಿಸಿದ ಸಂಬಂಧಿತ ಮಾಹಿತಿ, ವಿಳಾಸ ಮತ್ತು ಬ್ಯಾಂಕ್ ವಿವರಗಳನ್ನು ಪಡೆದುಕೊಂಡರು.

sonu-sood
ಸೋನು ಸೂದ್

"ಮೃತಪಟ್ಟಿರುವ ಅಥವಾ ಗಾಯಗೊಂಡಿರುವ ವಲಸಿಗರ ಕುಟುಂಬಗಳಿಗೆ ಸುರಕ್ಷಿತ ಭವಿಷ್ಯವನ್ನು ಹೊಂದಲು ನಾನು ಅವರಿಗೆ ಸಹಾಯ ಮಾಡಲು ನಿರ್ಧರಿಸಿದ್ದೇನೆ. ಅವರನ್ನು ಬೆಂಬಲಿಸುವುದು ನನ್ನ ವೈಯಕ್ತಿಕ ಜವಾಬ್ದಾರಿ ಎಂದು ನಾನು ಭಾವಿಸುತ್ತೇನೆ" ಎಂದು ಸೋನು ಸೂದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೋನು ಸೂದ್ ಈಗಾಗಲೇ ತವರು ರಾಜ್ಯಗಳಿಗೆ ಮರಳಲು ಬಯಸುವ ಸಾವಿರಾರು ವಲಸಿಗರಿಗೆ ಸಾರಿಗೆ ವ್ಯವಸ್ಥೆ ಮಾಡುತ್ತಿದ್ದಾರೆ. ಕಳೆದ ತಿಂಗಳು 300ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಮನೆ ತಲುಪಿಸಲು ಸಹಾಯ ಮಾಡಲು ಚಾರ್ಟರ್ಡ್ ವಿಮಾನಗಳ ವ್ಯವಸ್ಥೆ ಮಾಡಿದ್ದರು.

ಸಾಂಕ್ರಾಮಿಕ ಪ್ರೇರಿತ ಲಾಕ್‌ಡೌನ್ ಸಮಯದಲ್ಲಿ, ಸೋನು ಸೂದ್ ನೂರಾರು ವಲಸಿಗರಿಗೆ ಬಸ್‌ಗಳನ್ನು ವ್ಯವಸ್ಥೆ ಮಾಡುವ ಮೂಲಕ ಭಾರತದ ವಿವಿಧ ಭಾಗಗಳಲ್ಲಿರುವ ತಮ್ಮ ಕುಟುಂಬಗಳಿಗೆ ಮರಳಲು ಸಹಾಯ ಮಾಡಿದ್ದಾರ. ಜೊತೆಗೆ ಪಿಪಿಇ ಕಿಟ್‌ಗಳು ಮತ್ತು ಇತರ ಅವಶ್ಯಕ ವಸ್ತುಗಳನ್ನು ಪಂಜಾಬ್ ವೈದ್ಯರಿಗೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.