ಮುಂಬೈ: ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಸಲ್ಮಾನ್ ಖಾನ್ ಸಹೋದರಿ ಆಯೋಜಿಸಿದ್ದ ಕ್ರಿಸ್ಮಸ್ ಪಾರ್ಟಿಯಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದಾರೆ.
ದಬಾಂಗ್ 3 ಚಿತ್ರದ ಬಳಿಕ ಸಲ್ಮಾನ್ ಖಾನ್ ಕುಟುಂಬಕ್ಕೆ ಹತ್ತಿರುವಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮತ್ತು ಪತಿ ಆಯುಶ್ ಶರ್ಮಾ ಆಯೋಜಿಸಿದ್ದ ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ.
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿರುವ ದಬಾಂಗ್ 3 ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದಬಾಂಗ್ 3 ಚಿತ್ರದ ಅಭಿನಯಕ್ಕೆ ಕಿಚ್ಚ ಸುದೀಪ್ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಮತ್ತಷ್ಟು ಬಾಲಿವುಡ್ ಸಿನಿಮಾಗಳಲ್ಲಿ ಕಿಚ್ಚ ಕಾಣಿಸಿಕೊಳ್ಳಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
ಸಲ್ಲೂ ಸಹೋದರಿ ಪಾರ್ಟಿ ಅಂದ್ರೆ ಕೇಳ್ಬೇಕಾ ಸಲ್ಮಾನ್ ಖಾನ್, ಅರ್ಬಾಜ್ ಖಾನ್, ಸೋನಾಕ್ಷಿ ಸಿನ್ಹಾ, ರಿತೇಶ್ ದೇಶಮುಖ್ ರಾಣಿ ಮುಖರ್ಜಿ, ಏಕ್ತಾ ಕಪೂರ್ ಸೇರಿದಂತೆ ಬಾಲಿವುಡ್ನ ಹಲವು ತಾರೆಯರು ಭಾಗವಹಿಸಿದ್ದರು.