ETV Bharat / sitara

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ ತಳ್ಳಿಹಾಕಿದ ’ಮಹಾ’ ಗೃಹ ಸಚಿವ

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈ ಪೊಲೀಸರು ಸಮರ್ಥರಾಗಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಹೇಳಿದ್ದಾರೆ.

anil deshmukh
anil deshmukh
author img

By

Published : Jul 18, 2020, 12:53 PM IST

ನಾಗ್ಪುರ (ಮಹಾರಾಷ್ಟ್ರ): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈ ಪೊಲೀಸರು ಸಮರ್ಥರಾಗಿದ್ದು, ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಹೇಳಿದ್ದಾರೆ.

ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ಟ್ವೀಟ್ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನನಗೆ ಸರ್ಕಾರದಲ್ಲಿ ಸಂಪೂರ್ಣ ನಂಬಿಕೆ ಇದ್ದರೂ, ಸಿಬಿಐ ವಿಚಾರಣೆಯು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಹಾಯ ಮಾಡುತ್ತದೆ ಎಂದು ರಿಯಾ ಹೇಳಿದ್ದಾರೆ.

ನಟನ ಸಾವಿನ ಬಗ್ಗೆ ಮುಂಬೈ ಪೊಲೀಸರು ವಿವರವಾದ ವಿಚಾರಣೆ ನಡೆಸುತ್ತಿದ್ದು, ಸಂಬಂಧಪಟ್ಟವರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯವಿಲ್ಲ. ನಮ್ಮ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಸಮರ್ಥರಾಗಿದ್ದು, ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡುತ್ತಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.