ETV Bharat / sitara

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಮುಂಬೈ ಪೊಲೀಸರಿಂದ ಶೀಘ್ರ ತನಿಖೆ ಮುಕ್ತಾಯ? - ವರದಿಯನ್ನು ಸಲ್ಲಿಸಲು ಮುಂಬೈ ಪೊಲೀಸರು ಸಜ್ಜು

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿ ಸಲ್ಲಿಸಲು ಮುಂಬೈ ಪೊಲೀಸರು ಸಜ್ಜಾಗಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್
ಸುಶಾಂತ್ ಸಿಂಗ್ ರಜಪೂತ್
author img

By

Published : Jul 14, 2020, 8:33 PM IST

ಮುಂಬೈ: ಬಾಲಿವುಡ್‌ನ ಯುವನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ನಡೆದು ಸುಮಾರು ಒಂದು ತಿಂಗಳು ಕಳೆದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ತನಿಖಾ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಿವಿಜ್ಞಾನ ತನಿಖೆಯ ವರದಿಯನ್ನು ಎರಡು ವಾರಗಳಲ್ಲಿ ಮುಂಬೈ ಪೊಲೀಸರಿಗೆ ಸಲ್ಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲ್ಲಿಯವರೆಗೆ 35ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಅಗತ್ಯವಿದ್ದರೆ ಮುಂದಿನ 15-20 ದಿನಗಳಲ್ಲಿ ಇನ್ನೂ ಕೆಲವು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ ಎನ್ನಲಾಗುತ್ತಿದೆ.

ವಿಧಿವಿಜ್ಞಾನ ತಂಡವನ್ನು ಭೇಟಿಯಾದ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಯಾವುದೇ ಹೊಸ ವಿಷಯವನ್ನು ಕಂಡುಕೊಂಡಿಲ್ಲ. ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ತಮ್ಮ ಮುಂಬೈ ಅಪಾರ್ಟ್​ಮೆಂಟ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲವು ತಿಂಗಳಿನಿಂದ ಅವರು ಒತ್ತಡ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಈ ನಡುವೆ ಸುಶಾಂತ್ ಅವರ ಸಾವಿನ ಪ್ರಕರಣವನ್ನು ಹೆಚ್ಚಿನ ವಿಚಾರಣೆಗೆ ಸಿಬಿಐಗೆ ಹಸ್ತಾಂತರಿಸಬೇಕೆಂದು ಪೋಷಕರು, ಕೆಲವು ಸೆಲೆಬ್ರಿಟಿಗಳು ಒತ್ತಾಯಿಸುತ್ತಿದ್ದರು. ಮರಣೋತ್ತರ ವರದಿಯ ಹೊರತಾಗಿಯೂ ಅವರು 'ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ' ಎಂದು ಅನೇಕರು ಅನುಮಾನಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.