ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸಂಬಂಧ ತಮ್ಮ ಹೇಳಿಕೆಯನ್ನು ದಾಖಲಿಸಲು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಭನ್ಸಾಲಿ ಅವರು ಸೋಮವಾರ ಬಾಂದ್ರಾ ಪೊಲೀಸರ ಮುಂದೆ ಹಾಜರಾದರು.
ಈ ಪ್ರಕರಣದಲ್ಲಿ ಸಂಭವನೀಯ ವೃತ್ತಿಪರ ಪೈಪೋಟಿಯ ಕೋನದಡಿ ತನಿಖೆ ನಡೆಸುತ್ತಿರುವ ಪೊಲೀಸರು, ನಟನ ಖಿನ್ನತೆಯ ಹಿಂದಿನ ಕಾರಣಗಳ ಬಗ್ಗೆ ಭನ್ಸಾಲಿ ಅವರಿಂದ ಹೇಳಿಕೆ ಪಡೆಯಲಿದ್ದಾರೆ.
ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಅವರು ದೇಹ ಮುಂಬೈ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಯಾವುದೇ ಫೌಲ್ ಪ್ಲೇ ಅಥವಾ ಬಾಹ್ಯ ಗಾಯದ ಗುರುತುಗಳು ಕಂಡುಬಂದಿರದ ಕಾರಣ ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿಯದೆ ಪೊಲೀಸರಿಗೆ ತನಿಖೆ ಇನ್ನಷ್ಟು ತಲೆನೋವಾಗಿ ಪರಿಣಮಿಸಿದೆ.