ETV Bharat / sitara

ಸುಶಾಂತ್ ಸಾವಿನ ಪ್ರಕರಣ: ಪ್ರಧಾನಿ ಮಧ್ಯಪ್ರವೇಶಕ್ಕೆ ಪತ್ರ ಬರೆದ ಸಹೋದರಿ

author img

By

Published : Aug 1, 2020, 12:25 PM IST

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಮುಕ್ತ ಪತ್ರವೊಂದನ್ನು ಬರೆದಿದ್ದಾರೆ. ಸುಶಾಂತ್ ಸಾವಿನ ಪ್ರಕರಣದಲ್ಲಿ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇರುವುದರಿದ ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

sushanth and sister
sushanth and sister

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯಲ್ಲಿ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆ ಇದೆ ಎಂದು ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಕ್ತ ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಬಾಲಿವುಡ್‌ನಲ್ಲಿ ಸುಶಾಂತ್‌ಗೆ ಗಾಡ್‌ಫಾದರ್ ಇರಲಿಲ್ಲ, ಅದೇ ರೀತಿ ಕುಟುಂಬಕ್ಕೂ ಗಾಡ್​ಫಾದರ್ ಇಲ್ಲ ಎಂದು ಅವರು ತಮ್ಮ ಪತ್ರದಲ್ಲಿ ಹೇಳಿಕೊಂಡಿದ್ದಾರೆ. ಶ್ವೇತಾ ತನ್ನ ಫೇಸ್‌ಬುಕ್ ಖಾತೆಯಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.

"ನಾನು ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಇಡೀ ಪ್ರಕರಣದ ತುರ್ತು ತನಿಖೆಗಾಗಿ ವಿನಂತಿಸುತ್ತೇನೆ. ನಾವು ಭಾರತದ ನ್ಯಾಯಾಂಗ ವ್ಯವಸ್ಥೆಯನ್ನು ನಂಬುತ್ತೇವೆ ಮತ್ತು ನ್ಯಾಯವನ್ನು ನಿರೀಕ್ಷಿಸುತ್ತೇವೆ" ಎಂದು ಪತ್ರದಲ್ಲಿ ಅರಿಕೆ ಮಾಡಿಕೊಂಡಿದ್ದಾರೆ.

sushant-singh-rajputs-sister
ಪ್ರಧಾನಿ ಮೋದಿಗೆ ಪತ್ರ ಬರೆದ ಸಹೋದರಿ

"ನಾವು ತುಂಬಾ ಸರಳ ಕುಟುಂಬದವರು. ನನ್ನ ಸಹೋದರನಿಗೆ ಬಾಲಿವುಡ್‌ನಲ್ಲಿ ಗಾಡ್‌ಫಾದರ್ ಇರಲಿಲ್ಲ. ನನ್ನ ವಿನಂತಿಯಂತೆ ನೀವು ತಕ್ಷಣ ಈ ಪ್ರಕರಣವನ್ನು ಪರಿಶೀಲಿಸಬೇಕು. ಎಲ್ಲ ತನಿಖೆ ಸರಿಯಾಗಿ ನಿರ್ವಹಿಸುವಂತೆ ನೋಡಿಕೊಂಡು ಯಾವುದೇ ಪುರಾವೆಗಳು ಹಾಳಾಗದಂತೆ ಎಚ್ಚರ ವಹಿಸಬೇಕಿದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ" ಎಂದು ಪತ್ರದಲ್ಲಿ ಸುಶಾಂತ್​ ಸಹೋದರಿ ಬರೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.