ETV Bharat / sitara

ಸುಶಾಂತ್​​ ಆತ್ಮಹತ್ಯೆ: ನಟಿ ರಿಯಾ ಚಕ್ರವರ್ತಿ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ - ಸಿಬಿಐ ಪ್ರಕರಣ

ಸುಶಾಂತ್​ ಸಿಂಗ್​ ರಜಪೂತ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭಿಸಿರುವ ಸಿಬಿಐ ಇದೀಗ ರಿಯಾ ಚಕ್ರವರ್ತಿ ಹಾಗೂ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದೆ.

Sushant Singh suicide case
Sushant Singh suicide case
author img

By

Published : Aug 6, 2020, 9:04 PM IST

ಮುಂಬೈ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಿಯಾ ಚಕ್ರವರ್ತಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಸಿಬಿಐ ಕೂಡಾ ಅವರ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ಮುಂದುವರೆಸಿದೆ.

ಸುಶಾಂತ್​ ಅಕೌಂಟ್​ನಿಂದ ರಿಯಾ 15 ಕೋಟಿ ರೂ ಪಡೆದುಕೊಂಡಿದ್ದರು ಎಂಬ ಮಾಹಿತಿ ಬಹಿರಂಗಗೊಂಡಿದ್ದು, ಇದೇ ವಿಷಯಕ್ಕಾಗಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿತ್ತು.

ಸುಶಾಂತ್​ಗೆ ಹಣಕಾಸು ವ್ಯವಹಾರದಲ್ಲಿ ಮೋಸ ಮಾಡಿರುವ ಜತೆಗೆ ಮಾನಸಿಕ ಕಿರುಕುಳ ನೀಡಿದ್ದಾಳೆ ಎಂದು ರಿಯಾ ವಿರುದ್ಧ ಸುಶಾಂತ್​ ಸಿಂಗ್​​ ತಂದೆ ದೂರು ದಾಖಲಿಸಿದ್ದರು. ಹೀಗಾಗಿ ಪಾಟ್ನಾ ಪೊಲೀಸರು ರಿಯಾ ವಾಸವಿದ್ದ ಮುಂಬೈನ ಅಪಾರ್ಟ್​​ಮೆಂಟ್​ಗೆ ಭೇಟಿ ನೀಡಿದ್ದರು. ಇದಾದ ಬಳಿಕ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಲಾಗಿದೆ.

ಈ ಪ್ರಕರಣದ ವಿಚಾರಣೆ ಆರಂಭಿಸಿರುವ ಕೇಂದ್ರ ತನಿಖಾ ದಳ ಇದೀಗ ರಿಯಾ ಚಕ್ರವರ್ತಿ, ತಂದೆ ಇಂದ್ರಜಿತ್​, ತಾಯಿ ಸೌಂದರ್ಯ ಹಾಗೂ ಸಹೋದರ ಹಾಗೂ ಸಹೋದರಿ ಸೇರಿದಂತೆ ಕೆಲವರ ವಿರುದ್ಧ ದೂರು ದಾಖಲಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.