ಮುಜಾಫರ್‌ಪುರ್ (ಬಿಹಾರ): ಬಾಲಿವುಟ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ನಟ ಸಲ್ಮಾನ್ ಖಾನ್ ಸೇರಿದಂತೆ 8 ಮಂದಿ ವಿರುದ್ಧ ಮುಜಾಫರ್‌ಪುರ್ ಕೋರ್ಟ್‌ನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಸಲ್ಮಾನ್ ಖಾನ್ ಜೊತೆಗೆ ನಿರ್ಮಾಪಕ-ನಿರ್ದೇಶಕ ಕರಣ್ ಜೋಹರ್, ಆದಿತ್ಯ ಚೋಪ್ರಾ, ಸಾಜಿದ್ ನಾಡಿಯಾಡ್ವಾಲಾ, ಸಂಜಯ್ ಲೀಲಾ ಭನ್ಸಾಲಿ, ಭೂಷಣ್ ಕುಮಾರ್, ಏಕ್ತಾ ಕಪೂರ್ ಮತ್ತು ನಿರ್ದೇಶಕ ದಿನೇಶ್ ಅವರ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಎಲ್ಲಾ ಆರೋಪಿಗಳು ಅಕ್ಟೋಬರ್ 7ರೊಳಗೆ ಕೋರ್ಟ್‌ಗೆ ಹಾಜರಾಗಬೇಕೆಂದು ಇಲ್ಲಿನ ಸ್ಥಳೀಯ ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಆತ್ಮಹತ್ಯೆಗೆ ಈ 8 ಮಂದಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ವಕೀಲ ಸುಧೀರ್ ಕುಮಾರ್ ಓಜಾ ಎಂಬುವರು, ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲ, ಸುಶಾಂತ್ ಆತ್ಯೆಗೆ ಹಣ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ವಕೀಲ ಓಜಾ ಅವರ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಜಾ ಮಾಡಿ ನ್ಯಾಯಾಲಯದ ನ್ಯಾಯವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ರು. ಬಳಿಕ ವಕೀಲ ಓಜಾ ಬಾಲಿವುಡ್ ನಟರ ವಿರುದ್ಧ ಹೊಸದಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್, ಸುಶಾಂತ್ ಆತ್ಮಹತ್ಯೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ.