ನವದೆಹಲಿ: ಕೋವಿಡ್ ಸೋಂಕು ಎಲ್ಲೆಡೆಯೂ ವೇಗವಾಗಿ ಹರಡುತ್ತಿದೆ. ಅನೇಕ ಸೆಲೆಬ್ರಿಟಿಗಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಟಿ ಸ್ವರಾ ಭಾಸ್ಕರ್ ಅವರಲ್ಲೂ ಕೋವಿಡ್ ಸೋಂಕು ದೃಢಪಟ್ಟಿದ್ದು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಜನವರಿ 5ರಿಂದ ಐಸೋಲೇಷನ್ನಲ್ಲಿದ್ದು, ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸ್ವರಾ ಮನವಿ ಮಾಡಿದ್ದಾರೆ.
- " class="align-text-top noRightClick twitterSection" data="
">
ನನಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಎಲ್ಲರಿಗೂ ತಿಳಿಸಿದ್ದೇನೆ. ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ, ಡಬಲ್ ಮಾಸ್ಕ್ ಧರಿಸಿ, ಸುರಕ್ಷಿತವಾಗಿರಿ ಎಂದು ಸ್ವರಾ ಭಾಸ್ಕರ್ ಸಲಹೆ ನೀಡಿದ್ದಾರೆ. ಇತ್ತೀಚೆಗೆ ನಿರ್ಮಾಪಕಿ ಏಕ್ತಾ ಕಪೂರ್, ರಿಯಾ ಕಪೂರ್, ಜಾನ್ ಅಬ್ರಹಾಂ ಮತ್ತು ಜಾನ್ ಅಬ್ರಹಾಂ ಪತ್ನಿ ಪ್ರಿಯಾ ಅವರಲ್ಲೂ ಕೂಡಾ ಸೋಂಕು ದೃಢಪಟ್ಟಿತ್ತು.
ಇದನ್ನೂ ಓದಿ: OTT ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ನಟಿ ಸೋಹಾ ಅಲಿ ಖಾನ್