ETV Bharat / sitara

'ದಿ ಇಮ್ಮಾರ್ಟಲ್ ಅಶ್ವತ್ಥಾಮ' ಚಿತ್ರೀಕರಣಕ್ಕೆ ಸಿದ್ಧರಾಗುತ್ತಿರುವ ವಿಕ್ಕಿ, ಸಾರಾ - ದಿ ಇಮ್ಮಾರ್ಟಲ್ ಅಶ್ವತಮಾ ಚಿತ್ರೀಕರಣ

ದಿ ಇಮ್ಮಾರ್ಟಲ್ ಅಶ್ವತ್ಥಾಮ ಚಿತ್ರ ತಂಡವು ಚಿತ್ರೀಕರಣದ ವೇಳಾಪಟ್ಟಿಯನ್ನು ರೂಪಿಸುವಲ್ಲಿ ನಿರತವಾಗಿದ್ದು, ಪ್ರಮುಖ ನಟರಾದ ಸಾರಾ ಅಲಿ ಖಾನ್ ಮತ್ತು ವಿಕ್ಕಿ ಕೌಶಾಲ್ ತಮ್ಮ ಪಾತ್ರಗಳಿಗಾಗಿ ಸಿದ್ಧತೆ ನಡೆಸುತ್ತಿದ್ದಾರೆ..

Vicky and Sara
Vicky and Sara
author img

By

Published : May 22, 2021, 7:09 PM IST

Updated : May 24, 2021, 11:37 AM IST

ಹೈದರಾಬಾದ್ : 'ಉರಿ : ದಿ ಸರ್ಜಿಕಲ್ ಸ್ಟ್ರೈಕ್' ಚಿತ್ರದ ಬಳಿಕ ನಟ ವಿಕ್ಕಿ ಕೌಶಾಲ್ ಮತ್ತು ನಿರ್ದೇಶಕ ಆದಿತ್ಯ ಧಾರ್, 'ದಿ ಇಮ್ಮಾರ್ಟಲ್ ಅಶ್ವತ್ಥಾಮ' ಚಿತ್ರದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ.

ಕೋವಿಡ್-19 ನಿರ್ಬಂಧಗಳಿಲ್ಲದಿದ್ದರೆ ಈಗಾಗಲೇ ಚಿತ್ರೀಕರಣ ಆರಂಭವಾಗುತ್ತಿತ್ತು. ಲಾಕ್‌ಡೌನ್ ತೆಗೆದು ಹಾಕಿದ ತಕ್ಷಣ ಶೂಟಿಂಗ್ ಪ್ರಾರಂಭಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಪ್ರಸ್ತುತ ಜಾಗತಿಕ ಸಾಂಕ್ರಾಮಿಕ ರೋಗದಿಂದಾಗಿ ಮನರಂಜನಾ ಉದ್ಯಮವು ಆರ್ಥಿಕವಾಗಿ ಕಠಿಣ ಸಮಯವನ್ನು ಎದುರಿಸುತ್ತಿದ್ದು, ದಿ ಇಮ್ಮಾರ್ಟಲ್ ಅಶ್ವತ್ಥಾಮ ಚಿತ್ರ ತಂಡವೂ ತಮ್ಮ ಯೋಜನೆಯನ್ನು ಮರುವಿನ್ಯಾಸಗೊಳಿಸಬೇಕಾಯಿತು.

ನಟಿ ಸಾರಾ ಅಲಿ ಖಾನ್ ಮತ್ತು ನಟ ವಿಕ್ಕಿ ಕೌಶಾಲ್ ತಮ್ಮ ಪಾತ್ರಗಳಿಗಾಗಿ ಸಿದ್ಧತೆ ನಡೆಸುತ್ತಿದ್ದರೆ, ತಂಡವು ಚಿತ್ರೀಕರಣದ ವೇಳಾಪಟ್ಟಿಯನ್ನು ರೂಪಿಸುವಲ್ಲಿ ನಿರತವಾಗಿದೆ. ಸೆಪ್ಟೆಂಬರ್‌ನಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ದಿ ಇಮ್ಮಾರ್ಟಲ್ ಅಶ್ವತ್ಥಮ, 2023ರಲ್ಲಿ ಬಿಡುಗಡೆಗೆ ಸಿದ್ಧವಾಗಲಿದೆ.

Last Updated : May 24, 2021, 11:37 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.