ETV Bharat / sitara

ಸುಶಾಂತ್​ ತಂದೆ ಹೆಸರಿನಲ್ಲಿರುವ ಟ್ಟಿಟರ್​​ ಖಾತೆ ನಕಲಿ : ಕುಟುಂಬಸ್ಥರಿಂದ ಸ್ಪಷ್ಟನೆ

ನಟ ಸುಶಾಂತ್​ ಸಿಂಗ್ ತಂದೆ ಕೆ.ಕೆ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಖಾತೆಯನ್ನು ಹೊಂದಿಲ್ಲ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಜೂನ್ 27 ರ ನಂತರ ಕುಟುಂಬವು ಸುಶಾಂತ್​ಗೆ ಸಂಬಂಧಿಸಿದ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

author img

By

Published : Jul 5, 2020, 8:15 AM IST

sushant singh father twitter account fake
ನಟ ಸುಶಾಂತ್​ ಸಿಂಗ್ ತಂದೆಗೆ ಟ್ವಟ್ಟರ್ ಖಾತೆಯಿಲ್ಲ

ಪಾಟ್ನಾ: ಇತ್ತೀಚೆಗೆ ನಿಧನ ಹೊಂದಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಯಾವುದೇ ಟ್ವಿಟರ್ ಖಾತೆ ಹೊಂದಿಲ್ಲ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸುಶಾಂತ್​ ಸಾವಿನ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ಕೆ.ಕೆ. ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬಳಿಕ ಕುಟುಂಬಸ್ಥರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಕೆ.ಕೆ. ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಖಾತೆಯನ್ನು ಹೊಂದಿಲ್ಲ. ಯಾರೂ ಈ ವಿಷಯದಲ್ಲಿ ಸಾರ್ವಜನಿಕವಾಗಿ ಗೊಂದಲ ಸೃಷ್ಟಿಸಬೇಡಿ. ಜೊತೆಗೆ ಜೂನ್ 27ರ ನಂತರ ಕುಟುಂಬವು ಸುಶಾಂತ್​ಗೆ ಸಂಬಂಧಿಸಿದ ಯಾವುದೇ ಹೇಳಿಕೆ ನೀಡಿಲ್ಲ. ಸಿನೆಮಾ, ಕ್ರೀಡೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಮಹತ್ವಾಕಾಂಕ್ಷಿ ಪ್ರತಿಭೆಗಳನ್ನು ಬೆಂಬಲಿಸುವ ಉಪಕ್ರಮಗಳನ್ನು ಘೋಷಿಸಿಲ್ಲ ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಸುಶಾಂತ್​ ಸಿಂಗ್ ಅವರ ತಂದೆ ಕೆ.ಕೆ ಸಿಂಗ್, ತನ್ನ ಮಗನ ಸಾವು ಕೊಲೆ ಆದರೆ, ಕೆಲವರು ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಸುಶಾಂತ್​ ಸಾವಿನ ವಿಚಾರಣೆಯನ್ನು ಸಿಬಿಐಗೆ ಒಪ್ಪಿಸುವ ಮೂಲಕ ತಮ್ಮ ಮಗನಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿರುವುದಾಗಿ ಸುದ್ದಿಗಳು ಹರಿದಾಡುತ್ತಿತ್ತು.

ಇನ್ನು ಸುಶಾಂತ್​ ಸಿಂಗ್ ಮರಣೋತ್ತರ ಪರೀಕ್ಷೆ ಈಗಾಗಲೇ ಹೊರ ಬಂದಿದ್ದು, ಅದರಲ್ಲಿ ಸ್ಪಷ್ಟವಾಗಿ ಆತ್ಮಹತ್ಯೆ ಎಂದು ಹೇಳಲಾಗಿದೆ. ಆದರೂ, ಅಭಿಮಾನಿಗಳು ಮಾತ್ರ ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಶಾಂತ್​ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.