ETV Bharat / sitara

ಅರಮನೆ ಮೈದಾನದಲ್ಲಿ ಸಾವಿರಾರು ಮಂದಿಗೆ ಅನ್ನದಾನ: ಪುನೀತ್‌ ಬಯಕೆ ಈಡೇರಿತು!

ಪುನೀತ್ ರಾಜ್‍ಕುಮಾರ್ ಬದುಕಿದ್ದಾಗ ತಮ್ಮ ಅಭಿಮಾನಿಗಳಿಗೆ ಅನ್ನದಾನ ಮಾಡಬೇಕು ಅಂದುಕೊಂಡಿದ್ದರಂತೆ. ಆದರೆ ವಿಧಿಯಾಟದಿಂದ ಪುನೀತ್ ರಾಜ್‍ಕುಮಾರ್ ಬಾರದ ಲೋಕಕ್ಕೆ ಪಯಣ ಬೆಳೆಸಿದರು. ಆದ ಕಾರಣ ಅವರ ಪುಣ್ಯಸ್ಮರಣೆಯಂದು ರಾಜ್​ಕುಮಾರ್ ಕುಟುಂಬ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಿದೆ.

ಅಭಿಮಾನಿಗಳ ಬಗ್ಗೆ ಅಂದು ಪುನೀತ್​ ಇಟ್ಟುಕೊಂಡಿದ್ದ ಆಸೆಯನ್ನು ಇಂದು ಈಡೇರಿಸಿದ ರಾಜ್​ಕುಮಾರ್​ ಕುಟುಂಬ

author img

By

Published : Nov 9, 2021, 10:40 PM IST

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅಗಲಿ ಇಂದಿಗೆ 12ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಅಂಗಣದಲ್ಲಿ ಅನ್ನಸಂತರ್ಪಣೆ ಕಾರ್ಯ ನಡೆಯಿತು.

ಅಭಿಮಾನಿಗಳಿಗೆ ಪುನೀತ್ ರಾಜ್​​ಕುಮಾರ್ ಪತ್ನಿ ಅಶ್ವಿನಿ ಪುನೀತ್​ರಾಜ್​​​​ಕುಮಾರ್ ಊಟ ಬಡಿಸಿದರು. ಅವರ ಜೊತೆ ನಟ ಶಿವರಾಜ್​​ಕುಮಾರ್​ ಹಾಗೂ ಸಹೋದರ ರಾಘವೇಂದ್ರ ರಾಜ್​ಕುಮಾರ್ ಸಹ ಅಪ್ಪು ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ.

ಪುನೀತ್ ರಾಜ್‍ಕುಮಾರ್ ಬದುಕಿದ್ದಾಗ ತಮ್ಮ ಅಭಿಮಾನಿಗಳಿಗೆ ಅನ್ನದಾನ ಮಾಡಬೇಕು ಎಂದುಕೊಂಡಿದ್ದರಂತೆ. ಆದರೆ ವಿಧಿಯಾಟದಿಂದ ಅವರು ಬಾರದ ಲೋಕಕ್ಕೆ ಪಯಣ ಬೆಳೆಸಿದರು. ಆದ ಕಾರಣ ಅವರ ಪುಣ್ಯಸ್ಮರಣೆಯಂದು ರಾಜ್​ಕುಮಾರ್ ಕುಟುಂಬ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಿದೆ.

ಪುನೀತ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆಯಿತು. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಪುಣ್ಯಸ್ಮರಣೆ: ಅನ್ನಸಂತರ್ಪಣೆಗೆ ಹರಿದು ಬಂದ 40 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.