ETV Bharat / sitara

ಚಿತ್ರ ಮಂದಿರಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಅನುಮತಿ: ಸರ್ಕಾರದ ವಿರುದ್ಧ ಅಭಿಮಾನಿಗಳ ಆಕ್ರೋಶ - ರಾಜ್ಯ ಸರ್ಕಾರದ ವಿರುದ್ಧ ಅಭಿಮಾನಿಗಳ ಆಕ್ರೋಶ

ಚಿತ್ರ ಮಂದಿರಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಅನುಮತಿ ಆದೇಶ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ, ಡಾ ರಾಜ್ ಕುಮಾರ್ ಅಭಿಮಾನಿಗಳ ಒಕ್ಕೂಟ, ಡಾ ರಾಜ್ ಕುಮಾರ್ ಅಭಿಮಾನಿಗಳ ಸಂಘ, ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಅಪ್ಪು ಯೂತ್ ಬ್ರಿಗೇಡ್ ಕರ್ನಾಟಕ ಸಂಘದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Fans protest against state govt
ರಾಜ್ಯ ಸರ್ಕಾರದ ವಿರುದ್ಧ ಅಭಿಮಾನಿಗಳ ಆಕ್ರೋಶ
author img

By

Published : Apr 3, 2021, 6:47 PM IST

ರಾಜ್ಯದಲ್ಲಿ ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ, ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ಎಂದು ಆದೇಶ ಹೊರಡಿಸಿತ್ತು. ಇದರ ಎಫೆಕ್ಟ್ ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ಸಿನಿಮಾ ಮೇಲೆ ಆಗಿದೆ. ಈ ಬಗ್ಗೆ ನಿನ್ನೆಯಷ್ಟೇ ಪುನೀತ್ ರಾಜ್‍ಕುಮಾರ್ ಒಂದು ಸಾಮಾಜಿಕ ಕಳಕಳ ಇರುವ ಸಿನಿಮಾವನ್ನ ಕೊಲೆ ಮಾಡಲಾಗುತ್ತಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಅಭಿಮಾನಿಗಳ ಆಕ್ರೋಶ..

ಈಗ ರಾಜ್ಯ ಸರ್ಕಾರದ ವಿರುದ್ಧ, ಡಾ ರಾಜ್ ಕುಮಾರ್ ಅಭಿಮಾನಿಗಳ ಒಕ್ಕೂಟ, ಡಾ ರಾಜ್ ಕುಮಾರ್ ಅಭಿಮಾನಿಗಳ ಸಂಘ, ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಅಪ್ಪು ಯೂತ್ ಬ್ರಿಗೇಡ್ ಕರ್ನಾಟಕ ಸಂಘದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕಾ ಏಕಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ 50 ಪರ್ಸೆಂಟ್ ನೀತಿಯನ್ನ ವಿರೋಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂದೆ, ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಹಾಗೂ ಸಚಿವ ಸುಧಾಕರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯ ಸರ್ಕಾರದ ಜೊತೆ ಈ ಸಮಸ್ಯೆಯನ್ನ ಬಗೆ ಹರಿಸುವಂತೆ ಕನ್ನಡ ಫಿಲ್ಮ್ ಚೇಂಬರ್ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್​ಗೆ ಡಾ.ರಾಜ್​​ಕುಮಾರ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಮುರಳೀಧರ್ ಹಾಗೂ ಅಖಿಲ ಕರ್ನಾಟಕ ಶಿವರಾಜ್ ಅಭಿಮಾನಿಗಳು ಸಂಘದ ಅಧ್ಯಕ್ಷ ನಾರಾಯಣ್ ಹಾಗೂ ಯೂತ್ ಬ್ರಿಗೇಡ್ ಕರ್ನಾಟಕ ಅಭಿಮಾನಿಗಳ ಸಂಘದ ಅಧ್ಯಕ್ಷ ಮುರಳಿ ನೇತೃತ್ವದಲ್ಲಿ ಮನವಿ ಪತ್ರ ನೀಡಲಾಯಿತು.

ಬಳಿಕ ಮಾತನಾಡಿದ ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ನಾರಾಯಣ್ ಹಾಗೂ ಡಾ. ರಾಜ್ ಕುಮಾರ್ ಅಭಿಮಾನಿಗಳ ಒಕ್ಕೂಟದ ಸಂಘದ ಅಧ್ಯಕ್ಷ ಮುರಳಿಧರ್ ಕೂಡಲೇ ರಾಜ್ಯ ಸರ್ಕಾರ, 50 ಪರ್ಸೆಂಟ್ ಅನುಮತಿ ತೆಗೆದು, 100 ಪರ್ಸೆಂಟ್ ಅವಕಾಶ ಕೊಡಬೇಕೆಂದು ಒತ್ತಾಯಿಸಿದರು. ಈ ಕೆಲಸ ಆಗದಿದ್ದಲ್ಲಿ, ಪ್ರತಿ ಜಿಲ್ಲೆಗಳಲ್ಲಿ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾಕ್ಕೆ ಎಚ್ಚರಿಕೆ ರವಾನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.