1983ರಲ್ಲಿ ಭಾರತೀಯ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದ ಘಟನೆಯನ್ನು ಆಧರಿಸಿ ಬಾಲಿವುಡ್ನಲ್ಲಿ 83 ಸಿನಿಮಾ ಬರ್ತಾ ಇರೋದು ಗೊತ್ತಿರುವ ವಿಚಾರ. ಅಷ್ಟೇ ಅಲ್ಲ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿಯೂ ಇದೇ 24ರಂದು ವಿಶ್ವಾದ್ಯಂತ ಬಿಡುಗಡೆಗೆ ಸಜ್ಜಾಗಿದೆ.
ಇದು ಭಜರಂಗಿ ಬಾಯಿಜಾನ್ ಸಿನಿಮಾ ಬಳಿಕ ನಿರ್ದೇಶಕ ಕಬೀರ್ ಖಾನ್ ನಿರ್ದೇಶನ ಮಾಡಿರೋ ಹೈವೋಲ್ಟೆಜ್ ಸಿನಿಮಾ. ಈ ಸಿನಿಮಾವನ್ನ ಕನ್ನಡದಲ್ಲಿ ಕರ್ನಾಟಕದಾದ್ಯಂತ ಕಿಚ್ಚ ಸುದೀಪ್ ಬಿಡುಗಡೆಯ ಹೊಣೆ ಹೊತ್ತಿದ್ದಾರೆ.
ಕಾರಣ ಇಷ್ಟೇ, ಬಾಲ್ಯದಿಂದಲೂ ಕ್ರಿಕೆಟ್ ಪ್ಲೇಯರ್ ಆಗಬೇಕು ಅಂತಾ ಕನಸು ಕಂಡಿದ್ದ ಸುದೀಪ್ ಸಿನಿಮಾ ಸ್ಟಾರ್ ಆಗಿದ್ದು ಇತಿಹಾಸ. ಆದರೆ, ಸುದೀಪ್‌ಗೆ ತಾವು ಸ್ಟಾರ್ ಆಗಿದ್ದರು ಕೂಡ ಕ್ರಿಕೆಟ್ ವ್ಯಾಮೋಹ ಮಾತ್ರ ಕಡಿಮೆ ಆಗಿಲ್ಲ. ಅದಕ್ಕೆ ಸಾಕ್ಷಿ ಕಿಚ್ಚನ ನಾಯಕತ್ವದಲ್ಲಿ ಸಾಕಷ್ಟು ಕ್ರಿಕೆಟ್ ಲೀಗ್ಗಳು ನಡೆದಿರೋದು.
(ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ : ಕರ್ನಾಟಕ ಪತ್ರಕರ್ತನಿಗೆ ಜೈಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂಕೋರ್ಟ್)
ಇದೀಗ ಕ್ರಿಕೆಟ್ ಆಧರಿತ 83 ಸಿನಿಮಾದ ಮೇಲೆ ಕಿಚ್ಚನಿಗೆ ಅಪಾರವಾದ ಆಸಕ್ತಿ ಇದೆ. ಸಿನಿಮಾ ಬಗ್ಗೆ ತಮ್ಮದೇ ಪದಗಳಲ್ಲಿ ವರ್ಣಿಸಿದ್ದಾರೆ. 1983ರ ವಿಶ್ವಕಪ್ ಬಗ್ಗೆ ಮಾತನಾಡಲು ಹಲವು ವಿಚಾರಗಳಿವೆ. ಅದರಲ್ಲೊಂದು ಕಥೆ ಇದೆ ಅಂತಾ ಒಂದು ತಂಡ ನಂಬಿದೆ. ಆ ಕಥೆ ಮಹತ್ವದ್ದಾಗಲಿದೆ ಎಂಬ ನಂಬಿಕೆ ಆ ತಂಡಕ್ಕೆ ಇದೆ.
ಆ ನಂಬಿಕೆಯೇ ನನಗೆ ಒಂದು ಅದ್ಭುತ ಕಥೆಯಂತೆ ಕಾಣಿಸುತ್ತಿದೆ. ಒಬ್ಬ ಕ್ರಿಕೆಟ್ ಪ್ರೇಮಿಯಾಗಿ, ಭಾರತೀಯನಾಗಿ ಥಿಯೇಟರ್ನಲ್ಲಿ ಈ ಚಿತ್ರವನ್ನು ನೋಡಿ ಎಂಜಾಯ್ ಮಾಡಲು ಬಯಸುತ್ತೇನೆ. ಇಂಥ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ನಿರ್ದೇಶಕ ಕಬೀರ್ ಖಾನ್ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಭಾರತ ವಿಶ್ವಕಪ್ ಗೆದ್ದಾಗ ಎಷ್ಟು ಖುಷಿ ಆಗಿತ್ತೋ, ಅದೇ ರೀತಿ ಈ ಸಿನಿಮಾ ತೆರೆಕಾಣುತ್ತಿರುವುದಕ್ಕೆ ಖುಷಿ ಆಗುತ್ತಿದೆ ಎಂದು ಸುದೀಪ್ ಹೇಳಿದ್ದಾರೆ.
ಈ ವಿಡಿಯೋವನ್ನು ಬಾಲಿವುಡ್ ನಟ ರಣವೀರ್ ಸಿಂಗ್, ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ಕಿಚ್ಚ ಸುದೀಪ್ ಅವರು ಭಾರತದ ಮಹಾನ್ ಗೆಲುವನ್ನು ಬೆಳ್ಳಿಪರದೆ ಮೇಲೆ ನೋಡಲು ಎಕ್ಸೈಟ್ ಆಗಿದ್ದಾರೆ ಅಂತಾ ರಣವೀರ್ ಸಿಂಗ್ ಬರೆದುಕೊಂಡಿದ್ದಾರೆ.
(ಇದನ್ನೂ ಓದಿ: 'ಏನಪ್ಪಾ ನಿನ್ ಜತೆ ಹೊಂದಿಕೆಯಿಂದಿದ್ದರೇ ಇನ್ನೂ 2 ವರ್ಷ ಸಿಎಂ ಆಗಿರ್ತಿದ್ದೆ..' ಯತ್ನಾಳ್ ಮುಂದೆ ಹೀಗಂದ್ರಂತೆ ಬಿಎಸ್‌ವೈ)
ಇನ್ನು 1983ರಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ವಿಶ್ವಕಪ್ ಗೆಲ್ಲಿಸಿ ಕೊಟ್ಟ ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಮಿಂಚಿದ್ದಾರೆ. ಈಗಾಗ್ಲೇ ಬಿಡುಗಡೆ ಆಗಿರುವ ಟ್ರೈಲರ್ನಲ್ಲಿ ಥೇಟ್ ಕಪಿಲ್ ದೇವ್ ಹಾಗೆ ರಣವೀರ್ ಸಿಂಗ್ ಕಾಣ್ತಾ ಇದ್ದಾರೆ.
ಕರ್ನಾಟಕದಲ್ಲಿ ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್ಟೇನ್ಮೆಂಟ್ ಸಂಸ್ಥೆಗಳು ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ಇನ್ನು ರಣವೀರ್ ಸಿಂಗ್ ಜೋಡಿಯಾಗಿ ದೀಪಿಕಾ ಪಡುಕೋಣೆ ಕಾಣಿಸಿದ್ದಾರೆ.
ನಿರ್ದೇಶಕ ಕಬೀರ್ ಖಾನ್ ನಿರ್ದೇಶನದ ಜೊತೆಗೆ ವಿಷ್ಣುವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಅಡಿ ನಿರ್ಮಾಣ ಮಾಡಿದ್ದಾರೆ. ಟ್ರೈಲರ್ನಿಂದಲೇ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಸಿರುವ 83 ಸಿನಿಮಾ ದೊಡ್ಡ ಪರದೆ ಮೇಲೆ ನೋಡಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ.