ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಇದೀಗ ಇಂತಹದ್ದೇ ಹೊಸ ಕಾನ್ಸೆಪ್ಟ್ ಹೊಂದಿರುವ ಸಿನಿಮಾ 'ಆನ' ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದು, ಇದೊಂದು ಮಹಿಳಾ ಪ್ರಧಾನ, ಸೂಪರ್ ಹೀರೋ ಕನ್ಸೆಪ್ಟ್ ಮೇಲೆ ನಿರ್ಮಾಣವಾಗುತ್ತಿದೆ.
ಇದನ್ನೂ ಓದಿ : 'ಹೆಚ್ಚು ಸಿನಿಮಾಗಳು ರಿಲೀಸ್ ಆದ್ರೆ ಜನ ಥಿಯೇಟರ್ಗೆ ಬರ್ತಾರೆ'
ಸದ್ಯ ಆನ ಚಿತ್ರತಂಡ ಹೆಸರುಫಟ್ಟದ ಬಳಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದಿದೆ. ಈ ಸಿನಿಮಾಕ್ಕೆ ಮನೋಜ್ ಪಿ. ನಡುಲಮನೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಕಿರು ಹಾಗೂ ಟೆಲಿ ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಮನೋಜ್ ನಿರ್ದೇಶನ ಕೂಡ ಮಾಡಿದ್ದಾರೆ.
ಚಿತ್ರದಲ್ಲಿ, ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ಸುನೀಲ್ ಕುಮಾರ್ ಡಿ.ಕೆ., ವಿಕಾಶ್ ಉತ್ತಯ್ಯ, ಪ್ರೇರಣ ಕಂಬಂಮ್, ವರುಣ್ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜಾನ್, ಶಿವಮಂಜು ಮುಂತಾದವರ ತಾರಾಬಳಗವಿದೆ.