ಬೆಂಗಳೂರು: ನಟ ಚಿರಂಜೀವಿ ಸರ್ಜಾ (39) ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ ಅವರ ಗಂಟಲಿನ ದ್ರವವನ್ನು ಕೋವಿಡ್-19 ಪರೀಕ್ಷೆಗೆ ರವಾನಿಸಲಾಗಿತ್ತು. ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಅಪೋಲೋ ಆಸ್ಪತ್ರೆ ಮೂಲಗಳು ದೃಢಪಡಿಸಿವೆ.
ಸದ್ಯ ಆಸ್ಪತ್ರೆಗಳಲ್ಲಿ ಮರಣ ಹೊಂದಿದರೆ ಕೋವಿಡ್-19 ಟೆಸ್ಟ್ ನಡೆಸಲಾಗುತ್ತಿದೆ. ಮೈಕಲ್ ಮಂಜು ಮೃತಪಟ್ಟಾಗಲೂ ಕೊರೊನಾ ಪರೀಕ್ಷೆ ನಡೆಸಿ ಬೇಗ ವರದಿ ನೀಡಲಾಗಿತ್ತು. ಚಿರಂಜೀವಿ ಸರ್ಜಾ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ.
ಭಾನುವಾರ ಮಧ್ಯಾಹ್ನ 2:20 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಚಿರು, 3:48 ರ ವೇಳೆಗೆ ನಿಧನರಾದರು ಎಂದು ಜಯನಗರದ ಅಪೋಲೋ ಆಸ್ಪತ್ರೆ ಘೋಷಿಸಿದೆ.