ETV Bharat / sitara

'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಸಾಥ್ - 'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರ

'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರದ ಮೊದಲ ಲಿರಿಕಲ್ ವಿಡಿಯೋವನ್ನ ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದ್ದು, ಗೆಳೆಯ ದಿಗಂತ್ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು‌.

Actor Ganesh Support to diganth new movie
'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಸಾಥ್
author img

By

Published : Jul 8, 2021, 5:09 PM IST

ಸ್ಯಾಂಡಲ್ ವುಡ್​​ನ ಕ್ಯೂಟ್ ಕಪಲ್ ದಿಗಂತ್ ಹಾಗೂ ಐಂದ್ರಿತಾ ರೇ. ಬಹಳ ದಿನಗಳ ನಂತರ ಇವರಿಬ್ಬರು ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿರುವ ಚಿತ್ರ 'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ'. ಬಹುತೇಕ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಸದ್ಯ ಬಿಡುಗಡೆಗೆ ಸಿದ್ದವಾಗಿದೆ‌.

'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಸಾಥ್

ಇದೀಗ ಈ ಚಿತ್ರದ ಮೊದಲ ಲಿರಿಕಲ್ ವಿಡಿಯೋವನ್ನ ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದ್ದು, ಗೆಳೆಯ ದಿಗಂತ್ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು‌. ಅಡಿಕೆ ಬೆಳಗಾರನ ಪಾತ್ರದಲ್ಲಿ ದಿಗಂತ್ ಕಾಣಿಸಿಕೊಂಡಿದ್ದು, ಕಾಮಿಡಿ ಜೊತೆಗೆ ಉತ್ತಮ ಸಂದೇಶವನ್ನ ಈ ಚಿತ್ರ ಒಳಗೊಂಡಿದೆಯಂತೆ.

ಇದನ್ನೂ ಓದಿ: ಅಡಿಕೆ ಸುಲಿದ 'ಪುಟ್ಟಗೌರಿ' ನಟಿ: ವಿಡಿಯೋ ನೋಡಿ..

ಕೆಲವು ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ವಿನಾಯಕ ಕೋಡ್ಸರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಿರ್ದೇಶಕ ಹೇಳುವ ಹಾಗೇ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಸದ್ಯದಲ್ಲೇ ಮೊದಲ ಕಾಪಿ ರೆಡಿಯಾಗಲಿದ್ದು, ಚಿತ್ರಮಂದಿರಗಳು ತೆರೆದ ಮೇಲೆ ಈ ಚಿತ್ರವನ್ನು ಬಿಡುಗಡೆ ಮಾಡುವ ಪ್ಲಾನ್​​ನಲ್ಲಿದ್ದಾರೆ‌.

ಈ‌ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಂದ ಕಿಶೋರ್, ಎನ್. ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ. ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ವೇಳೆ ನಟ ದಿಗಂತ್, ನಟಿ ರಂಜನಿ ರಾಘವನ್, ಲಹರಿ ವೇಲು, ನಿರ್ದೇಶಕ ವಿನಾಯಕ ಕೋಡ್ಸರ ಹಾಗು ನಿರ್ಮಾಪಕ ಸಿಲ್ಕ್ ಮಂಜು ಉಪಸ್ಥಿತರಿದ್ದರು.

ಇದನ್ನೂ ಓದಿ: ದಿಗಂತ್​​​​ ಮುಂದಿನ ಸಿನಿಮಾಕ್ಕೆ ಈ ಕಿರುತೆರೆ ನಟಿ ನಾಯಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.