ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ಗೆ ಇದೀಗ ಸ್ಯಾಂಡಲ್ವುಡ್ನ ಕೋಟಿ ನಿರ್ಮಾಪಕ ಎಂದು ಕರೆಯಿಸಿಕೊಂಡಿದ್ದ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ರಾಮು ನಿಧನರಾಗಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅವರು ಇಂದು ಸಂಜೆ ಇಹಲೋಕ ತ್ಯಜಿಸಿದ್ದಾಗಿ ಮಾಹಿತಿ ತಿಳಿದು ಬಂದಿದೆ. 52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು.

ಇದರ ಮಧ್ಯೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಗೋಲಿಬಾರ್, ಎಕೆ 47, ಸಿಂಹದ ಮರಿಯಂತಹ ಬ್ಲಾಕ್ ಬಸ್ಟರ್ ಚಿತ್ರ ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದುಕೊಂಡಿದ್ದರು.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರ ನಿರ್ಮಾಣ ಮಾಡಿರುವ ಇವರು, ಗೋಲಿಬಾರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಲಗ್ಗೆ ಹಾಕಿದ್ದರು. ವಿಶೇಷವೆಂದರೆ

ಕನ್ನಡದಲ್ಲಿ ಕೋಟಿ ಬಜೆಟ್ನ ಚಿತ್ರ ನಿರ್ಮಾಣ ಮಾಡಿದ್ದರು. ಹೀಗಾಗಿ ಅವರಿಗೆ ಕೋಟಿ ರಾಮು ಎಂಬ ಹೆಸರು ಬಂದಿತ್ತು.

ಸ್ಯಾಂಡಲ್ವುಡ್ ಚಿತ್ರರಂಗದಲ್ಲಿ 39 ಚಿತ್ರ ನಿರ್ಮಾಣ ಮಾಡಿರುವ ಇವರು, ಗೋಲಿಬಾರ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಲಗ್ಗೆ ಹಾಕಿದ್ದರು.
