ಲಿಖಿತ್ ಶೆಟ್ಟಿ ಅಭಿನಯದ ಫ್ಯಾಮಿಲಿ ಪ್ಯಾಕ್ ಚಿತ್ರವನ್ನು ಅರ್ಜುನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಇಂದು ಚಿತ್ರದ ಸೆಟ್ಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಆಗಮಿಸಿ ಚಿತ್ರೀಕರಣ ವೀಕ್ಷಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಸಂಕಷ್ಟಕರ ಗಣಪತಿ ಸಿಮಿಮಾದ ಬಳಿಕ ಲಿಖಿತ್ ಶೆಟ್ಟಿ ಫ್ಯಾಮಿಲಿ ಪ್ಯಾಕ್ ಚಿತ್ರದಲ್ಲಿ ನಟಿಸುತ್ತಿದ್ದು, ಇವರ ಜೊತೆ ಅಮೃತ ಅಯ್ಯಂಗಾರ್ ರೊಮ್ಯಾನ್ಸ್ ಮಾಡಲಿದ್ದಾರೆ. ರಂಗಾಯಣ ರಘು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಫುಲ್ ಕಾಮಿಡಿ ಓರಿಯೆಂಟೆಡ್ ಚಿತ್ರವಾಗಿದೆ. ಬಹುತೇಕ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇಂದು ನಟ ಪುನೀತ್ ದಂಪತಿ ಭೇಟಿ ನೀಡಿ ಶುಭ ಕೋರಿದರು.
ಪಿಆರ್ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದಲ್ಲಿ ಲಿಖಿತ್ ಶೆಟ್ಟಿ, ಲಿಖಿತ್ ಶೆಟ್ಟಿ, ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾಗೌಡ, ನಾಗಭೂಷಣ್ ಮುಂತಾದವರು ಅಭಿನಯಿಸಿದ್ದಾರೆ.
ಇದನ್ನೂ ಓದಿ: ಸರಳವಾಗಿ ಸೀಮಂತ ಶಾಸ್ತ್ರ ಮುಗಿಸಿಕೊಂಡ ಕಿರುತೆರೆ ನಟಿ ಚೈತ್ರಾ ರೈ
ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲಾ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್. ಕುಮಾರ್ ಅವರ ಸಂಕಲನವಿದೆ. ಮಾಸ್ತಿ ಫ್ಯಾಮಿಲಿ ಪ್ಯಾಕ್ಗೆ ಸಂಭಾಷಣೆ ಬರೆದಿದ್ದಾರೆ.