ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಕಾರುಬಾರು ಜೋರಾಗಿದೆ. ಅದ್ಧೂರಿ ಮೇಕಿಂಗ್ ಜೊತೆಗೆ ಕೋಟಿ ಹಣ ಹೂಡಿಕೆ ಮಾಡಿ ಕನ್ನಡ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಇದೀಗ ಹೆಸರಿಡದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಅಭಿನಯಿಸುತ್ತಿದ್ದಾರೆ.
ಈ ಹಿಂದೆ ಶಿವರಾಜ್ ಕುಮಾರ್ ಅಭಿನಯದ ಕೆಲ ಚಿತ್ರಗಳು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆ ಆಗಿದ್ದವು. ಬುದ್ಧಿವಂತ-2 ಚಿತ್ರದ ನಿರ್ದೇಶಕ ಆರ್. ಜಯರಾಂ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರದ ಮೂಲಕ ಅವರ ಹೆಸರನ್ನು ಆರ್ ಜೈ ಎಂದು ಬದಲಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ರೆಟ್ರೊ ಶೈಲಿಯ ಕಥೆ ಹೊಂದಿದೆ. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ ಹಾಗೂ ರಚಿತಾ ರಾಂ ಕಾಂಬಿನೇಶನ್ ಲಕ ಲಕ ಲ್ಯಾಂಬೋರ್ಗಿನಿ ಹಾಡು ನಿರ್ಮಾಣ ಮಾಡಿದ್ದ ಆರ್.ಕೇಶವ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಬಿಂದ್ಯಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಹೆಸರಿಡದ ಈ ಚಿತ್ರವನ್ನು ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ಸದ್ಯ ನಟ ಶಿವರಾಜ್ ಕುಮಾರ್ ಚಿತ್ರದ ಒಂದು ಲೈನ್ ಕಥೆಯನ್ನು ಓಕೆ ಮಾಡಿದ್ದಾರೆ. ಸದ್ಯದಲ್ಲೇ ತಾಂತ್ರಿಕ ವರ್ಗ ಹಾಗೂ ತಾರಾಬಳಗದ ಬಗ್ಗೆ ಮಾಹಿತಿಯನ್ನ ಚಿತ್ರತಂಡ ಹಂಚಿಕೊಳ್ಳಲಿದೆ.
ಅನೇಕ ಭಾಷೆಗಳಲ್ಲಿ ಹೊಸ ಚಿತ್ರ ಬಿಡುಗಡೆಯಾಗಲಿದೆ. ಮುಂದಿನ ತಿಂಗಳು ಮೋಷನ್ ಪೋಸ್ಟರ್ ಬಿಡುಗಡೆ ಹಾಗೂ ಅದ್ಧೂರಿ ಮುಹೂರ್ತ ಸಮಾರಂಭ ನಡೆಯಲಿದೆ ಎಂದು ನಿರ್ದೇಶಕ ಆರ್ ಜೈ ತಿಳಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ