ಕನ್ನಡದ ಬಾದ್‌ಶಾ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ. ಕೆಲವು ತಿಂಗಳ ಹಿಂದೆ ಜಗತ್ತಿನ ಅತೀ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾ ಮೇಲೆ ಈ ಚಿತ್ರದ ಟೈಟಲ್ ಲಾಂಚ್ ಮಾಡಿ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದರು.

ವಿಕ್ರಾಂತ್ ರೋಣ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಅಂತಾ ಫ್ಯಾನ್ಸ್ ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಈಗ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೌದು, ಮುಂದಿನ ವರ್ಷ ಫೆಬ್ರವರಿ 24 ರಂದು ದೇಶದ್ಯಾಂತ ಚಿತ್ರ ತೆರೆಗೆ ಬರಲಿದೆ.
ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ, ವಿಕ್ರಾಂತ್ ರೋಣ ಶೂಟಿಂಗ್ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಇದು ಆ್ಯಕ್ಷನ್ ಓರಿಯೆಂಟೆಂಡ್ ಸಿನಿಮಾವಾಗಿದೆ. ಕಿಚ್ಚ ಸುದೀಪ್ ಈ ಚಿತ್ರದಲ್ಲಿ ಸಖತ್ ಸ್ಟೈಲಿಷ್ ಜೊತೆಗೆ ಡಿಫ್ರೆಂಟ್ ಅವತಾರದಲ್ಲಿ ಕಾಣ್ತಾರೆ. ಇದರ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್, ಶ್ರಾದ್ಧಾ ಶ್ರೀನಾಥ್, ಹೀಗೆ ದೊಡ್ಡ ಕಲಾವಿದರು ದಂಡು ಚಿತ್ರದಲ್ಲಿದೆ.
ನಿರ್ಮಾಪಕ ಜಾಕ್ ಮಂಜು ನಿರ್ಮಾಣದ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಸೇರಿದಂತೆ 14 ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.