ETV Bharat / sitara

ನ್ಯೂಯಾರ್ಕ್-ಪ್ಯಾರಿಸ್ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ 'ಕಾಲಚಕ್ರ'

ಕಾಲಚಕ್ರ ಚಿತ್ರದ ರಿಮೇಕ್ ಹಕ್ಕು ಮಲಯಾಳಂ ಭಾಷೆಗೆ ಮಾರಾಟವಾಗಿದೆ. ಅಲ್ಲಿನ ಖ್ಯಾತ ನಿರ್ಮಾಪಕರೊಬ್ಬರು 'ಕಾಲಚಕ್ರ'ವನ್ನು ಮಲಯಾಳಂನಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ವಸಿಷ್ಠ ಸಿಂಹ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.

kalachakra
ಕಾಲಚಕ್ರ ಸಿನೆಮಾ
author img

By

Published : Jul 2, 2021, 7:18 PM IST

ಕಂಚಿನ ಕಂಠದಿಂದಲೇ ಸ್ಯಾಂಡಲ್​ವುಡ್​ನಲ್ಲಿ ಛಾಪು ಮೂಡಿಸಿರೋ ನಟ ವಸಿಷ್ಠ ಸಿಂಹ. ಇದೀಗ ಅವರು ಕಾಲಚಕ್ರ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ತೆರೆ ಮುಂದೆ ಬರಲು ಸಿದ್ದರಾಗಿದ್ದಾರೆ. ಅದಕ್ಕೂ ಮುನ್ನ ಈ ಸಿನಿಮಾ ಪಶ್ಚಿಮ ಬಂಗಾಳದ ಟ್ಯಾಗೋರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.

Actor Vasishta simha
ನಟ ವಸಿಷ್ಠ ಸಿಂಹ

ನ್ಯೂಯಾರ್ಕ್, ಪ್ಯಾರಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಈ ಚಿತ್ರ ಆಯ್ಕೆಯಾಗಿದ್ದು, ಸದ್ಯದಲ್ಲೇ ಪ್ರದರ್ಶನವಾಗಲಿದೆ. ನ್ಯೂಯಾರ್ಕ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಸುಮಾರು 3500 ಸಾವಿರಕ್ಕೂ ಅಧಿಕ ಚಿತ್ರಗಳು ಬಂದಿದ್ದವು. ಅದರಲ್ಲಿ 100 ಚಿತ್ರಗಳು ಮಾತ್ರವೇ ಆಯ್ಕೆಯಾಗಿದ್ದು, ಅದರಲ್ಲಿ ನಮ್ಮ ಕಾಲಚಕ್ರ ಚಿತ್ರ ಸಹ ಒಂದು ಎಂದಿರುವ ನಿರ್ದೇಶಕ ಸುಮಂತ್ ಕ್ರಾಂತಿ, ನಮ್ಮ ಚಿತ್ರಕ್ಕೆ ಪ್ರಶಸ್ತಿ ದೊರಕುವ ಭರವಸೆ ಇದೆ ಎನ್ನುತ್ತಾರೆ.

ಸುಮಾರು 25ಕ್ಕೂ ಹೆಚ್ಚು ದೇಶಗಳ ಚಲನಚಿತ್ರೋತ್ಸವಗಳಿಗೆ ಈ ಚಿತ್ರವನ್ನು ಕಳುಹಿಸುವ ಯೋಜನೆ ಕೂಡ ಅವರಿಗಿದೆಯಂತೆ. ಇತ್ತೀಚೆಗೆ ಈ ಚಿತ್ರದ ರಿಮೇಕ್ ಹಕ್ಕು ಮಲಯಾಳಂ ಭಾಷೆಗೆ ಮಾರಾಟವಾಗಿದ್ದು, ಅಲ್ಲಿನ ಖ್ಯಾತ ನಿರ್ಮಾಪಕರೊಬ್ಬರು 'ಕಾಲಚಕ್ರ'ವನ್ನು ಮಲಯಾಳಂನಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ವಸಿಷ್ಠ ಸಿಂಹ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಸುಮಂತ್ ಕ್ರಾಂತಿ ಅವರೇ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ. ಎಲ್ ಎಂ ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ವಸಿಷ್ಠ ಎನ್ ಸಿಂಹ, ರಕ್ಷ, ದೀಪಕ್ ಶೆಟ್ಟಿ, ಸುಚೇಂದ್ರ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: ಈ ವೆಬ್​ಸೈಟ್​ದು ಕಾಪಿನಾ ಅಪ್ಪು ಅಭಿನಯದ ‘ದ್ವಿತ್ವ’ ಸಿನಿಮಾ ಪೋಸ್ಟರ್?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.