'ಯಶೋ ಮಾರ್ಗ'ದಲ್ಲಿ ಕೆರೆ ಕಟ್ಟಿ ರೈತರ ಬದುಕಿಗೆ ಆಸರೆಯಾಗಿದ್ದ ರಾಕಿಂಗ್ ಸ್ಟಾರ್ ಯಶ್, ಸದ್ಯ ಸಂಕಷ್ಟದಲ್ಲಿರುವ ಸಿನಿ ಕುಟುಂಬದ ನೆರವಿಗೆ ಧಾವಿಸಿದ್ದಾರೆ. ತೆರೆ ಮೆಲೆ ಹಾಗೂ ತೆರೆ ಹಿಂದೆ ಅವಿರತವಾಗಿ ದುಡಿದ ಸುಮಾರು 3000ಕ್ಕೂ ಹೆಚ್ಚು ಜನರಿಗೆ ಆಸೆಯಾಗಲು ನಿರ್ಧಿರಿಸಿರುವ ರಾಕಿ ಭಾಯ್ ತಲಾ 5000 ರೂ. ನೀಡಲು ಸಿದ್ಧರಾಗಿದ್ದಾರೆ.
ಸಂಕಷ್ಟದಲ್ಲಿ ಸಿನಿ ಕುಟುಂಬದ ಕೈಹಿಡಿದ ಯಶ್!
ಬಡತನದಿಂದಲೇ ಬಣ್ಣದ ಲೋಕಕ್ಕೆ ಕಾಲಿಟ್ಟ ಯಶ್, ತನ್ನವರ ಕಷ್ಟಕ್ಕೆ ಮಿಡಿದಿದ್ದಾರೆ. ಈ ಕುರಿತು ಸಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ 'ರಾಮಾಚಾರಿ', ಕಾಣದ ವೈರಸ್ನಿಂದ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ.
-
#togetherwestand #humanity pic.twitter.com/46FYT9pThz
— Yash (@TheNameIsYash) June 1, 2021 " class="align-text-top noRightClick twitterSection" data="
">#togetherwestand #humanity pic.twitter.com/46FYT9pThz
— Yash (@TheNameIsYash) June 1, 2021#togetherwestand #humanity pic.twitter.com/46FYT9pThz
— Yash (@TheNameIsYash) June 1, 2021
ಖಾತೆಗೆ ತಲಾ 5 ಸಾವಿರ ರೂಪಾಯಿ:
ಹಾಗಾಗಿ ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂ. ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ.
'ನಾನು ಮಾಡಿದ್ದು ಸಣ್ಣ ಸಹಾಯ ಅಷ್ಟೇ!'
ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ. ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಭಾವನೆ ಹಂಚಿಕೊಂಡಿದ್ದಾರೆ.