ETV Bharat / sitara

ಭೋಜ್ ಪುರಿ ಸಿನಿಮಾ ಬಳಿಕ ಕನ್ನಡಕ್ಕೆ ಬಂದ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ

author img

By

Published : Jan 26, 2022, 8:58 AM IST

ಕನ್ನಡದಲ್ಲಿ 'ಸ್ತಬ್ಧ' ಎಂಬ ಹೆಸರಿನ ಹೊಸ ಸಿನಿಮಾವೊಂದು ಸೆಟ್ಟೇರಿದೆ. ಸದ್ಯ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿದೆ. ಈ ಚಿತ್ರಕ್ಕೆ ನಿರ್ದೇಶಕ ಲಾಲಿ ರಾಘವ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ರಾಘವೇಂದ್ರ ರಾಜ್‌ಕುಮಾರ್‌ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Actress Harshika Poonacha Came Back From Bhojpuri Films For Kannada Movie
'ಸ್ತಬ್ಧ' ಚಿತ್ರ ತಂಡ

ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ 'ಭೋಜ್‌ಪುರಿ' ಚಿತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿದ್ದರು. ಅವರಿಗೆ ಭೋಜ್‌ಪುರಿ ಚಿತ್ರರಂಗದಲ್ಲಿ ಹೆಚ್ಚಿನ ಬೇಡಿಕೆ ಇದೆ. ಅಲ್ಲಿ ಹರ್ಷಿಕಾ ಅವರು ಸ್ಟಾರ್‌ ನಟಿಯಾಗಿದ್ದಾರೆ. ಎರಡನೇ ಭೋಜ್‌ಪುರಿ ಸಿನಿಮಾಗಾಗಿ ಹರ್ಷಿಕಾ ಅವರು ಕೆಲವು ದಿನಗಳ ಕಾಲ ಅಲ್ಲೇ ಉಳಿದಿದ್ದರು. ಈಗ ಕನ್ನಡ ಚಿತ್ರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ.

ಯುವ ನಟ ಪ್ರತಾಪ್ ಸಿಂಹ,  ರಾಘವೇಂದ್ರ ರಾಜ್‌ಕುಮಾರ್‌ ಮತ್ತು ಹರ್ಷಿಕಾ ಪೂಣಚ್ಚ

ಹಿರಿಯ ನಟ ರಾಘವೇಂದ್ರ ರಾಜ್​​ಕುಮಾರ್ ಮುಖ್ಯ ಭೂಮಿಕೆಯಲ್ಲಿ 'ಸ್ತಬ್ಧ' ಎಂಬ ಸಿನಿಮಾ ನಿರ್ಮಾಣವಾಗುತ್ತಿದೆ. ಹರ್ಷಿಕಾ ಪೂಣಚ್ಚ, ಯುವ ನಟ ಪ್ರತಾಪ್ ಸಿಂಹ ಅವರಿಗೆ ಜೋಡಿಯಾಗುತ್ತಿದ್ದಾರೆ. ಸ್ತಬ್ಧ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆದಿದ್ದು, ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರ ಛಾಯಾಗ್ರಹಣ ಇರುವ ಈ ಚಿತ್ರ ಮನುಷ್ಯನ ಮನಸ್ಸು, ಸ್ಥಿಮಿತತೆ ಕಳೆದುಕೊಂಡು ಭ್ರಮಾಲೋಕಕ್ಕೆ ಪಯಣಿಸಿದಾಗ ಆಗುವಂತಹ ಪರಿಣಾಮವೇನು? ಎಂಬ ಕಥಾ ಹಂದರ ಹೊಂದಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಚಿತ್ರದ ಬಗ್ಗೆ ಮಾತನಾಡಿದ ರಾಘವೇಂದ್ರ ರಾಜ್​​ಕುಮಾರ್, ಈ ಚಿತ್ರದಲ್ಲಿ ಕಥೆಯೇ ಒಂದು ಪಾತ್ರ. ನಾವೆಲ್ಲ ಚಿಕ್ಕ ಚಿಕ್ಕ ಪಾತ್ರ ಮಾಡಿದ್ದೇವೆ. ಸಸ್ಪೆನ್ಸ್ ಚಿತ್ರವಾಗಿರುವುದರಿಂದ ಕಥೆಯ ಬಗ್ಗೆ ಅಷ್ಟು ಹೇಳುವ ಹಾಗಿಲ್ಲ ಎಂದರು.

ನಟಿ ಹರ್ಷಿಕಾ ಪೂಣಚ್ಚ ಮಾತನಾಡಿ, ನನ್ನ ಮೊದಲ ಚಿತ್ರದ ನಂತರ ರಾಘಣ್ಣ ಫೋನ್ ಮಾಡಿದ್ದರು.‌ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಜಾಕಿ ಚಿತ್ರದಲ್ಲಿ ನೀವು ನಟಿಸಬೇಕು ಎಂದರು. ಆಗ ನನಗಾದ ಆನಂದಕ್ಕೆ ಪಾರವೇ ಇಲ್ಲ. ಶಿವಣ್ಣ, ಪುನೀತ್ ಸರ್ ಜತೆ ನಟಿಸಿದ್ದೆ. ಈ ಚಿತ್ರದಲ್ಲಿ ರಾಘಣ್ಣ ಅವರ ಮಗಳಾಗಿ ಅಭಿನಯಿಸುತ್ತಿದ್ದೇನೆ. ಡಾ.ರಾಜಕುಮಾರ್ ಅವರ ಮೂರು ಮಕ್ಕಳ ಜತೆ ನಟಿಸುವ ಭಾಗ್ಯ ನನಗೆ ಸಿಕ್ಕಿರುವ ಸಂತಸವಿದೆ ಎಂದರು.

Actress Harshika Poonacha
ನಟಿ ಹರ್ಷಿಕಾ ಪೂಣಚ್ಚ

ಯುವ ನಟ ಪ್ರತಾಪ್ ಸಿಂಹ ಮಾತನಾಡಿ, ನಾನು ಈಗಾಗಲೇ ರಾಘಣ್ಣ ಅವರೊಂದಿಗೆ ರಾಜತಂತ್ರ, ರಾಜಿ ಚಿತ್ರಗಳಲ್ಲಿ ನಟಿಸಿದ್ದೇನೆ. ರಾಘಣ್ಣ ಅವರೊಟ್ಟಿಗೆ ಅಭಿನಯಿಸುವುದೇ ಒಂದು ಸುಂದರ ಅನುಭವ. ಉತ್ತಮ ಕಥೆಯುಳ್ಳ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ ಎಂದರು.

ಉಳಿದಂತೆ ಚಿತ್ರದಲ್ಲಿ ಪ್ರಶಾಂತ್ ಸಿದ್ದಿ, ಶ್ರುತಿ ರಾಜ್, ಬೇಬಿ ಅಂಕಿತ, ಚಿನ್ಮಯ್ ಮತ್ತು ಪ್ರಿಯಾಂಕಾ ನಟಿಸುತ್ತಿದ್ದಾರೆ. ಈಗಾಗಲೇ ತಮಿಳಿನಲ್ಲಿ ಒಂದು ಚಿತ್ರ ನಿರ್ದೇಶಿಸಿರುವ, ಲಾಲಿ ರಾಘವ 'ಸ್ತಬ್ಧ' ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ.

ನಿರ್ದೇಶಕ ಲಾಲಿ ರಾಘವ ಅವರಿಗೆ ಇದು 2ನೇ ಸಿನಿಮಾ. 36ಕ್ಕೂ ಹೆಚ್ಚಿನ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಕ್ರಿಯಾಶೀಲ ತಂತ್ರಜ್ಞ ಪಿ. ವಿ. ಆರ್ ಸ್ವಾಮಿ ಛಾಯಾಗ್ರಹಣ, ಹಂಸಲೇಖ ಅವರ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಆರವ್ ರಿಷಿಕ್ ಅವರ ಸಂಗೀತ ನಿರ್ದೇಶನವಿದೆ. ವೈದ್ಯ ಡಾ. ಡಿ.ವಿ.ವಿದ್ಯಾ ಸಾಗರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭೋಜ್​ಪುರಿ ಸಿನಿಮಾದಲ್ಲಿ ಮಿಂಚಲಿದ್ದಾರೆ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.