ಕೃಷ್ಣ ಲೀಲಾ, ಇಷ್ಟಕಾಮ್ಯ, ಗಣಪ, ರುಸ್ತುಂ ಸಿನಿಮಾಗಳ ಮೂಲಕ ತಮ್ಮದೇ ಐಡೆಂಟಿಟಿಯನ್ನ ಕ್ರಿಯೇಟ್ ಮಾಡಿಕೊಂಡವರು ನಟಿ ಮಯೂರಿ ಕ್ಯಾತರಿ. ಕೆಲವು ತಿಂಗಳ ಹಿಂದೆ ಬಹುಕಾಲದ ಗೆಳೆಯ ಅರಣ್ ಜೊತೆ ಸಪ್ತಪದಿ ತುಳಿದಿದ್ರು. ಈಗ ದೀಪಾವಳಿ ಹಬ್ಬದಲ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಬೆಳಕಿನ ಹಬ್ಬದ ದಿನದಂದು ಮೊದಲ ಮಗುವಿನ ನಿರೀಕ್ಷೆಯ ಸಂತಸವನ್ನ ರಿವೀಲ್ ಮಾಡಿದ್ದಾರೆ. ಈ ವಿಷಯ ತಿಳಿಸಲು ಮಯೂರಿ ಕ್ಯಾತರಿ ತಮ್ಮ ಪತಿ ಜೊತೆ ಪ್ರೆಗ್ನೆನ್ಸಿ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಕಲರ್‌ಫುಲ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಾವು ಗರ್ಭಿಣಿಯಾಗಿರುವ ವಿಷಯವನ್ನು ತಿಳಿಸಿದ್ದಾರೆ.
ಜೂನ್ 12ರಂದು ಅರುಣ್ ಜೊತೆ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ರು.