ETV Bharat / sitara

ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃವಿಯೋಗ

author img

By

Published : May 19, 2019, 12:29 PM IST

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ರಾಧಿಕಾ ಕುಮಾರಸ್ವಾಮಿ ತಂದೆ ದೇವರಾಜ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ರಾಧಿಕಾ ಕುಮಾರಸ್ವಾಮಿ, ದೇವರಾಜ್​

ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ತಂದೆ ದೇವರಾಜ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇವರಾಜ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ವಾರ ಇಡೀ ಕುಟುಂಬ ನೇಮ, ಕೋಲ ಹಬ್ಬಕ್ಕೆ ಪಾಲ್ಗೊಳ್ಳಲು ಮಂಗಳೂರಿಗೆ ತೆರಳಿದ್ದರು. ನಾಲ್ಕು ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದು ದೇವರಾಜ್​​​​ಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಇಂದು ಮಂಗಳೂರಿನ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಿ ನಾಳೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ. ಚಿತ್ರರಂಗದ ಹಲವು ಗಣ್ಯರು ರಾಧಿಕಾ ತಂದೆ ಅಂತಿಮ ದರ್ಶನಕ್ಕಾಗಿ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಟಿ ರಾಧಿಕ ಕುಮಾರಸ್ವಾಮಿ ತಂದೆ ಇನ್ನಿಲ್ಲ...!!!!

ನಟಿ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ತಂದೆ ದೇವರಾಜ್ ಇನ್ನಿಲ್ಲ.ಕೆಲ ದಿನಗಳಿಂದಅನಾರೋಗ್ಯದಿಂದ ಬಳಲುತ್ತಿದ್ದ ದೇವರಾಜ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಎನ್ ಯು ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಮಂಗಳೂರಿನಲ್ಲಿ ನೇಮ,ಕೋಲ ಹಬ್ಬದ ಸಂಭ್ರಮದಲ್ಲಿದ್ದ ಸಂಭ್ರಮದಲಿದ್ದ ಇಡೀ ಕುಟುಂಬ. ಹಬ್ಬ ಮುಗಿಸಿ ಬೆಂಗಳೂರಿಗೆ ಬಂದಿದ್ದರು . ಸಂಭ್ರಮದ ಬಳಿಕ ಕಫ ಹೆಚ್ಚಾಗಿ ಇಂದು ಅಸ್ಪತ್ರೆಗೆ ದಾಖಲಾಗಿದ್ದರು .ಅದರೆ ಚಿಕಿತ್ಸೆ ಫಲಕಾರಯಾಗದೆ ಇಂದು ಬೆಳಗ್ಗೆ ವಿಧಿವಶರಾಗಿದ್ದರೆ. ಇನ್ನೂ ರಾಧಿಕ ಅವರ ತಂದೆಯ ಪಾರ್ಥೀವ ಶರೀರವನ್ನು ಇಂದು ಮಂಗಳೂರಿನ ಸ್ವಗ್ರಾಮಕ್ಕೆ ತೆಗೆದು ಕೊಂಡು ಹೋಗಿ ನಾಳೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

ಸತೀಶ ಎಂಬಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.