ನವದೆಹಲಿ: ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಇಂದು ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜನವರಿ 21 ಕ್ಕೆ ಮುಂದೂಡಿಕೆ ಮಾಡಿದೆ.
ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು ನಟಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿತು. ಕಳೆದ ನವೆಂಬರ್ 3 ರಂದು ನಟಿ ರಾಗಿಣಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಹಾಗಾಗಿ ರಾಗಿಣಿ ಬೇಲ್ಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.