ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ತಮ್ಮ ಜೆನೆಕ್ಸ್ಟ್ ಚಾರಿಟಬಲ್ ಟ್ರಸ್ಟ್ ಮೂಲಕ ಕಾಕ್ಸ್ಟೌನ್ ಸಮೀಪದ ಕಲ್ಲಹಳ್ಳಿ ಮತ್ತು ಭಾರತೀನಗರ ಸ್ಮಶಾನದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ರೇಷನ್ ಕಿಟ್‌ಗಳನ್ನು ವಿತರಿಸಿದ್ದಾರೆ.
‘ಅಲ್ಲಿ ಮಹಿಳೆಯೊಬ್ಬರನ್ನು ನೋಡಿದೆ. ಕಳೆದ ನಾಲ್ಕು ದಶಕಗಳಿಂದ ಅವರು ಸ್ಮಶಾನದಲ್ಲೇ ವಾಸಿಸುತ್ತಿದ್ದಾರೆ. ಅವರಿಗೆ ಹೊರಗಿನ ಪ್ರಪಂಚದ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಮಗಳು ಸಹ ಅಲ್ಲೇ ಇದ್ದು, ಆಕೆಯೂ ಅದೆಷ್ಟೋ ವರ್ಷಗಳಿಂದ ಅಲ್ಲಿಯೇ ಜೀವಿಸುತ್ತಿದ್ದಾರೆ. ಸ್ಮಶಾನದಲ್ಲಿ ಕೆಲಸ ಮಾಡುವವರು ಮತ್ತು ಅವರ ಸಮಸ್ಯೆಗಳ ಕುರಿತು ಯಾರೂ ಹೆಚ್ಚು ಯೋಚಿಸುವುದಿಲ್ಲ. ಅವರಿಗೆ ಸರಿಯಾಗಿ ಸಂಬಳ ಮತ್ತು ಆಹಾರ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮದೊಂದು ಪುಟ್ಟ ಸಹಾಯ' ಎಂದು ರಾಗಿಣಿ ಹೇಳಿಕೊಂಡಿದ್ದಾರೆ.
ಕಳೆದ ಬಾರಿಯ ಲಾಕ್‌ಡೌನ್ ವೇಳೆಯಲ್ಲೂ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ರಾಗಿಣಿ ಗಮನ ಸೆಳೆದಿದ್ದರು.