ಬೆಂಗಳೂರು: ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ ಮಾಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಸ್ಯಾಂಡಲ್ವುಡ್ ನಟಿ ಸಂಜನಾ ಗರ್ಲಾನಿ 2 ಸಾವಿರ ರೂ.ದಂಡ ಕಟ್ಟಿ, ಕ್ಷಮಾಪಣಾ ಪತ್ರ ಬರೆದು ಕೊಟ್ಟಿದ್ದಾರೆ.
ಕಳೆದ ಜ.12 ರಂದು ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನೊಂದಿಗೆ ಕಾರು ಚಲಾಯಿಸಿಕೊಂಡು ಹೋಗುವಾಗ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು.
ಇದನ್ನೂ ಓದಿ: ಸಂಜನಾ ಸೆಲ್ಫಿ ವಿಡಿಯೋ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲಿಸಲು ಪೊಲೀಸರ ನಿರ್ಧಾರ
ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು 2 ಸಾವಿರ ರೂ.ದಂಡ ಪಾವತಿಸುವಂತೆ ನಟಿಗೆ ನೊಟೀಸ್ ನೀಡಿದ್ದರು. ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಸಂಜನಾ ಪೊಲೀಸರಿಗೆ ಕ್ಷಮಾಪಣಾ ಪತ್ರ ಬರೆದು, 2 ಸಾವಿರ ರೂ.ದಂಡ ಪಾವತಿಸಿದ್ದಾರೆ.