ಬೆಂಗಳೂರು: ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ತಾರಾ ಅನುರಾಧ 25 ಲಕ್ಷ ರೂಪಾಯಿ ಚೆಕ್ ಅನ್ನು ಕೊರೊನಾ ಪರಿಹಾರ ನಿಧಿಗೆ ನೀಡಿದರು.
ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಉಪಸ್ಥಿತರಿದ್ದರು.ಈ ವೇಳೆ ತಾರಾ ಅನುರಾಧ ಹಾಗು ಸಂಸ್ಥೆಯ ಎಲ್ಲಾ ಅಧಿಕಾರಿಗಳನ್ನು ಸಿಎಂ ಅಭಿನಂದಿಸಿದರು.