ಶರಣ್ ಅಭಿನಯದ 'ಅಧ್ಯಕ್ಷ ಇನ್ ಅಮೆರಿಕ' ಸಿನಿಮಾ ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಶರಣ್ ಜೊತೆ ಪ್ರಮುಖ ಪಾತ್ರದಲ್ಲಿ ರಾಗಿಣಿ ದ್ವಿವೇದಿ ನಟಿಸಿದ್ದಾರೆ.
'ಕೆಂಪೇಗೌಡ', 'ವಿಕ್ಟರಿ' ಸಿನಿಮಾದ ಹಾಡೊಂದರಲ್ಲಿ ಜೊತೆಯಾಗಿ ನಟಿಸಿದ್ದ ಶರಣ್ ಹಾಗೂ ರಾಗಿಣಿ ದ್ವಿವೇದಿ, 'ಅಧ್ಯಕ್ಷ ಇನ್ ಅಮೆರಿಕ' ಸಿನಿಮಾದಲ್ಲಿ ಪೂರ್ಣ ಪ್ರಮಾಣದ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅಮೆರಿಕದ ಸಿಯಾರ್ಟ್ ಎಂಬ ಸಿಟಿಯಲ್ಲಿ ರಾಗಿಣಿ, ಶರಣ್ ರೊಮ್ಯಾನ್ಸ್ ಮಾಡಿದ್ದಾರೆ. ಶೇ. 70ರಷ್ಟು ಸಿನಿಮಾವನ್ನು ಅಮೆರಿಕದಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಇದೀಗ ಚಿತ್ರದ ಹಾಡೊಂದರ ಮೇಕಿಂಗ್ ಫೋಟೋಗಳು ರಿವೀಲ್ ಆಗಿವೆ. ಚಿತ್ರದ ಪ್ರಮೋಷನ್ ಕೆಲಸ ಕೂಡಾ ಭರ್ಜರಿಯಾಗಿ ನಡೆಯುತ್ತಿದೆ.
ವಿಕ್ಟರಿ, ರ್ಯಾಂಬೋ ಸಿನಿಮಾಗಳಿಗೆ ಡೈಲಾಗ್ ರೈಟರ್ ಆಗಿ ಕೆಲಸ ಮಾಡಿರುವ ಯೋಗಾನಂದ್ ಮುದ್ದಾನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ವಿಶ್ವಪ್ರಸಾದ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಚಿತ್ರದ ಹಾಡುಗಳಿಗೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.