ಕೊರೊನಾ ಭೀತಿ ಕನ್ನಡ ಚಿತ್ರೋದ್ಯಮಕ್ಕೆ ಭಾರಿ ಹೊಡೆತ ಕೊಟ್ಟಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ CBFC(Central Board of Film Certification ) ನೀಡಿರುವ ಕೆಲವು ಸಲಹೆಗಳನ್ನು ತಿಳಿಸಿದ್ರು. ಕಳೆದ 22ನೇ ತಾರೀಖಿನಿಂದ ಈ ತಿಂಗಳು 31ರವರೆಗೆ ಚಿತ್ರಮಂದಿರಗಳು, ಸಿನಿಮಾ ಶೂಟಿಂಗ್ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಗಲೇ ಪ್ರದರ್ಶನ ಕಾಣುತ್ತಿದ್ದ ಸಿನಿಮಾಗಳಿಗೆ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದ ನಂತ್ರ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಇನ್ನು ಯಾವುದಾದರು ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಇನ್ನೆರಡು ಮೂರು ದಿನಗಳಲ್ಲಿ ಚಿತ್ರೀಕರಣ ಮುಗಿಯುವ ಹಂತದಲ್ಲಿದ್ದರೆ ಆ ವೇಳೆ ಮಾಸ್ಕ್, ಸ್ಯಾನಿಟೈಸರ್ ಸೇರಿ ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡು ಶೂಟಿಂಗ್ ಮಾಡಬೇಕೆಂದು ತಿಳಿಸಲಾಗಿದೆ.