ಮುಂಬೈ: ಭಾನುವಾರ ಬೆಳಗ್ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೊಳಗಾಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ನೀಡಿರುವ ಕಾರಣ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ.
- — Akshay Kumar (@akshaykumar) April 5, 2021 " class="align-text-top noRightClick twitterSection" data="
— Akshay Kumar (@akshaykumar) April 5, 2021
">— Akshay Kumar (@akshaykumar) April 5, 2021
ಕಳೆದ ಭಾನುವಾರ ಕೋವಿಡ್ ಸೋಂಕಿಗೊಳಗಾಗಿದ್ದ ಅಕ್ಷಯ್ ಕುಮಾರ್, ನನ್ನ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಪಟ್ಟಿರುವೆ. ಅಗತ್ಯ ವೈದ್ಯಕೀಯ ಆರೈಕೆ ಪಡೆದಿರುವೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಶೀಘ್ರದಲ್ಲೇ ಗುಣಮುಖನಾಗುವೆ ಎಂದು ತಿಳಿಸಿದ್ದರು.
ಇದನ್ನೂ ಓದಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಅಂಟಿದ ಕೊರೊನಾ
ಇಂದು ಸಹ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರ ಹಾರೈಕೆ,ಪ್ರಾರ್ಥನೆಗಳು ಕೆಲಸ ಮಾಡಿರುವಂತೆ ಕಾಣುತ್ತಿದ್ದು, ಅದಕ್ಕಾಗಿ ಧನ್ಯವಾದಗಳು. ನಾನು ಚೆನ್ನಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮೆನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆದಷ್ಟು ಬೇಗ ಡಿಸ್ಚಾರ್ಜ್ ಆಗಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಆಲಿಯಾ ಭಟ್, ರಣಬೀರ್ ಕಪೂರ್, ಅಮೀರ್ ಖಾನ್, ಕಾರ್ತಿಕ್ ಆರ್ಯನ್, ಮನೋಜ್ ಬಾಜಪೇಯ್, ಮಾಧವನ್ ಸೇರಿದಂತೆ ಅನೇಕ ಬಾಲಿವುಡ್ ನಟರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.