ಚಿತ್ರಮಂದಿರಗಳಿಗೆ ಶೇ.50ರಷ್ಟು ಮಾತ್ರ ಅನುಮತಿ ನೀಡಿದ್ದನ್ನು ಹಿಂತೆಗೆದು ಸಿನಿಮಾ ವೀಷಣೆಗೆ ಶೇ.100ರಷ್ಟು ಅನುಮತಿ ನೀಡಬೇಕು ಎಂದು ನಟ ಡಾಲಿ ಧನಂಜಯ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಚಿತ್ರಮಂದಿರಗಳು ಹಾಗೂ ಮಾಲ್ಗಳಲ್ಲಿ ಶೇ.50ರಷ್ಟು ಮಂದಿಗೆ ಅವಕಾಶ ನೀಡುವಂತೆ, ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಈ ವಿಷಯ ಕನ್ನಡ ಚಿತ್ರರಂಗದ ನಟರು ಹಾಗೂ ನಿರ್ಮಾಪಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇದೇ ವಿಷಯವಾಗಿ ನಟ ಡಾಲಿ ಧನಂಜಯ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ದಯವಿಟ್ಟು ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಅವಕಾಶ ಕೊಡಿ ಎಂದು ಡಾಲಿ ಧನಂಜಯ್ ಮನವಿ ಮಾಡಿಕೊಂಡಿದ್ದಾರೆ.