ಮುಂಬೈ: ನದೀಮ್-ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೋವಿಡ್ಗೆ ಬಲಿಯಾಗಿದ್ದಾರೆ.
66 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಮುಂಬೈನ ಎಸ್.ಎಲ್.ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
90ರ ದಶಕದ ಪ್ರಸಿದ್ಧ ಸಂಗೀತ ಸಂಯೋಜಕರಾಗಿದ್ದ ಶ್ರವಣ್ ರಾಥೋಡ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ ಹಿಂದೂಸ್ತಾನಿ, ಆಶಿಕಿ ಸೇರಿದಂತೆ ಅನೇಕ ಫೇಮಸ್ ಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
ಇವರ ನಿಧನಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್, ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.