ಬೆಂಗಳೂರು: ಅರಗಿಣಿ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಮಿಂಚಿದ ನವ್ಯಾ ರಾವ್, ಗೆಳೆಯ ವರುಣ್ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಇವರಿಬ್ಬರ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ನವ್ಯಾ ಸ್ನೇಹಿತರೊಬ್ಬರ ಮದುವೆಯಲ್ಲಿ ವರುಣ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿ ಇವರಿಬ್ಬರಿಗೂ ಪರಿಚಯವಾಗಿ ಸ್ನೇಹಿತರಾಗಿದ್ದರು. ನಂತರ ವರುಣ್, ನವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಆಗ ನವ್ಯಾ ಕೂಡ ಅವರ ಪ್ರೀತಿಯನ್ನು ಒಪ್ಪಿಕೊಂಡಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
- " class="align-text-top noRightClick twitterSection" data="
">
ಇಬ್ಬರು ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದಾರೆ. ಎರಡು ಮನೆಯವರು ಕೂಡ ಖುಷಿಯಿಂದ ಒಪ್ಪಿಕೊಂಡು ಬೇಗ ಮದುವೆ ಮಾಡಲು ನಿರ್ಧರಿಸಿದ್ದಾರೆ. ಮಾರ್ಚ್ 18ರಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಜೋಡಿಯ ಫೋಟೋಗಳು ಇದೀಗ ಬಹಿರಂಗವಾಗಿವೆ.
ವರುಣ್ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಕೊರೊನಾ ವೈರಸ್ ಸಮಸ್ಯೆ ಮುಗಿದ ನಂತರ ಜೂನ್ 7 ಮತ್ತು 8ರಂದು ಬೆಂಗಳೂರಿನಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂದು ತಿಳಿದುಬಂದಿದೆ.
ನವ್ಯಾ ಕನ್ನಡ ಮಾತ್ರವಲ್ಲದೇ ತೆಲುಗು ಸೀರಿಯಲ್‍ನಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ ನವ್ಯಾ ‘ರಾಮಸೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.