ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಇದೇ ತಿಂಗಳು 27 ರಂದು ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಟ್ರೇಲರ್ ನೋಡಿದ ಮೇಲಂತೂ ಅಭಿಮಾನಿಗಳು ಸಿನಿಮಾ ನೋಡಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
- " class="align-text-top noRightClick twitterSection" data="">
ಇನ್ನು 'ಅವನೇ ಶ್ರೀಮನ್ನಾರಾಯಣ' ಚಿತ್ರದ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು ಒಂದೇ ದಿನದಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಮಂದಿ ಈ ಹಾಡನ್ನು ನೋಡಿದ್ದಾರೆ. 'ಕೇಳಿ ಕಾದಿರುವ ಬಾಂಧವರೆ..ಭುವಿಯಲ್ಲಿ ಅವನ ಅರಿತವರೆ' ಎಂಬ ಸಾಲಿನಿಂದ ಆರಂಭವಾಗುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಸಂಗಡಿಗರು ಹಾಡಿದ್ದಾರೆ. ಚಿತ್ರದ ಹಾಡುಗಳಿಗೆ ಬಿ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪುಷ್ಕರ್ ಫಿಲ್ಮ್ಸ್ ಬ್ಯಾನರ್ ಅಡಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಹೆಚ್.ಕೆ. ಪ್ರಕಾಶ್ ಸಿನಿಮಾವನ್ನು ನಿರ್ಮಿಸಿದ್ದರೆ ಸಚಿನ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 'ಹ್ಯಾಂಡ್ಸ್ ಅಪ್ ಹಾಡಿಗೆ ಅಭಿಮಾನಿಗಳು ಹ್ಯಾಟ್ಸ್ ಆಫ್ ಹೇಳಿದ್ದು ಈ ಹಾಡು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.