ಬಾಲಿವುಡ್ನ ಡ್ರೀಮ್ ಸಿನಿಮಾ ನಟ ಆಯುಷ್ಮಾನ್ ಖುರಾನ್ ಇದೀಗ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಅದ್ರಲ್ಲೂ ಹಿರಿಯ ನಾಗರಿಕರಿಗೆ ಈ ಸಮಯದಲ್ಲಿ ಏನೆಲ್ಲ ಕ್ರಮಗಳನ್ನು ಕೈಗೂಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಜೊತೆ ಕೈಜೋಡಿಸಿ ಜಾಗೃತಿ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಯುಷ್ಮಾನ್ ಖುರಾನ್, ಕೊರೊನಾದ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹ್ಯಾಪಿ ಟು ಹೆಲ್ಪ್ ಎಂಬ ಟಾಸ್ಕ್ ಫೋರ್ಸ್ ರಚಿಸಿದೆ. ಇದರಿಂದ ಹಿರಿಯ ನಾಗರಿಕರಿಗೆ ಸಹಾಯ ಮಾಡುತ್ತಿದೆ. ವೃದ್ಧರಿಗೆ ಬೇಕಾಗುವ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಈ ಆಯೋಗವು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಅಭಿಮಾನಿಗಳಿಗೂ ಅಸಹಾಯಕರಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಈ ರೀತಿಯ ಕೆಲಸ ಮಾಡಲು ನನಗೆ ಹೆಮ್ಮೆ ಅನಿಸುತ್ತದೆ. ದೇಶದ ಎಲ್ಲ ಜನರು ಸ್ವಯಂ ಪ್ರೇರಿತರಾಗಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.