ETV Bharat / sitara

ಮಾತಿನ ಮನೆ ಸೇರಿದ 'ಬಡವ ರಾಸ್ಕಲ್' - ಬಡವ ರಾಸ್ಕಲ್ ಚಿತ್ರದ ಡಬ್ಬಿಂಗ್​ ಸುದ್ದಿ

ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ 'ಬಡವ ರಾಸ್ಕಲ್' ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಬಾಕಿಯಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್​​ನಲ್ಲಿ ಬ್ಯುಸಿಯಾಗಿದೆ. ಡಾಲಿಗೆ ನಾಯಕಿಯಾಗಿ ಚಿತ್ರದಲ್ಲಿ ಅಮೃತ ಅಯ್ಯಂಗಾರ್ ಅಭಿನಯಿಸುತ್ತಿದ್ದಾರೆ.

badava rascal movie dubbing
'ಬಡವ ರಾಸ್ಕಲ್'
author img

By

Published : Aug 31, 2020, 9:30 PM IST

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ 'ಬಡವ ರಾಸ್ಕಲ್' ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ.

'ಬಡವ ರಾಸ್ಕಲ್'

ಕೊರೊನಾದಿಂದ ಚಿತ್ರದ ಶೂಟಿಂಗ್​​ಗೆ ಬ್ರೇಕ್ ಬಿದ್ದಿದ್ದು, ಸದ್ಯ ಲಾಕ್​​ಡೌನ್ ತೆರವು ನಂತ್ರ ಬಡವ ರಾಸ್ಕಲ್ ಚಿತ್ರ ಪೋಸ್ಟ್ ಪ್ರೊಡಕ್ಷನ್​​ನಲ್ಲಿ ಬ್ಯುಸಿಯಾಗಿದ್ದು,ಚಿತ್ರದ ಡಬ್ಬಿಂಗ್ ಶುರುವಾಗಿದೆ. ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದ್ದು ಹಿರಿಯ ನಟಿ ತಾರಾ ಸೇರಿದಂತೆ ಚಿತ್ರದ ಪೋಷಕ ಪಾತ್ರಗಳ ಡಬ್ಬಿಂಗ್ ಶುರುವಾಗಿದೆ.

badava rascal movie dubbing
'ಬಡವ ರಾಸ್ಕಲ್'

ಇನ್ನು ಬಡವ ರಾಸ್ಕಲ್ ಚಿತ್ರ ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ಸುತ್ತುವ ಕಥೆ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನವ ನಿರ್ದೇಶಕ ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ,ಸಂಭಾಷಣೆಯನ್ನು ಶಂಕರ್ ಗುರು ಅವರೆ ಬರೆದಿದ್ದಾರೆ.

ಅಲ್ಲದೆ ಡಾಲಿ ಧನಂಜಯ್​ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್, ಪೂರ್ಣಚಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.