ಟ್ರೈಲರ್ ಹಾಗು ಪೋಸ್ಟರ್ನಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಹವಾ ಸೃಷ್ಟಿಸಿದ ಭಜರಂಗಿ 2 ಸಿನಿಮಾ ಇಂದು ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ.
ಕೆಲವೆಡೆ ಮುಂಜಾನೆ 5 ಗಂಟೆಗೆ ಸಿನಿಮಾ ಬಿಡುಗಡೆ ಆಗಿದ್ದು, ಅಭಿಮಾನಿಗಳು ಪಟಾಕಿ ಸಿಡಿಸಿ, ಶಿವರಾಜ್ ಕುಮಾರ್ ಕಟೌಟ್ಗೆ ಬೃಹತ್ ಹೂವಿನ ಹಾರ ಹಾಕುವ ಮೂಲಕ ಸಂಭ್ರಮಿಸಿದ್ದಾರೆ.
ಅಭಿಮಾನಿಗಳ ಖುಷಿಯನ್ನು ಮತ್ತಷ್ಟು ಹೆಚ್ಚಿಸಲು ಮುಂಜಾನೆಯೇ ಶಿವರಾಜ್ ಕುಮಾರ್ ಬೆಂಗಳೂರಿನ ಗೌಡನ ಪಾಳ್ಯದ ಶ್ರೀನಿವಾಸ ಹಾಗು ಸಿದ್ದೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿದರು. ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಶಿವಣ್ಣ ಸಿನಿಮಾ ನೋಡಿದ್ದಾರೆ ಎನ್ನಲಾಗಿದೆ.
ಚಿತ್ರದಲ್ಲಿ ಭಾವನಾ ಮೆನನ್, ಶೃತಿ, ಭಜರಂಗಿ ಲೋಕಿ ಸೇರಿದಂತೆ ದೊಡ್ಡ ತಾರಾ ಬಳಗವಿದೆ. ಎರಡು ವರ್ಷಗಳ ಬಳಿಕ ಶಿವರಾಜ್ ಕುಮಾರ್ ಸಿನಿಮಾ ಬಿಡುಗಡೆ ಆಗಿದೆ.