ಕನ್ನಡ ಚಿತ್ರರಂಗ ಮಾತ್ರವಲ್ಲದೇ, ಭಾರತೀಯ ಸಿನಿರಂಗದಲ್ಲಿ ಟೈಟಲ್ನಿಂದಲೇ ಹವಾ ಸೃಷ್ಟಿಸಿರುವ ಚಿತ್ರ ಕಬ್ಜ. ನಿರ್ದೇಶಕ ಆರ್.ಚಂದ್ರ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.
ಕಬ್ಜ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿಂದ ಮಿನರ್ವ ಮಿಲ್ನಲ್ಲಿ ಅದ್ಧೂರಿಯಾಗಿ ಸೆಟ್ ನಿರ್ಮಾಣ ಮಾಡಲಾಗಿತ್ತು. ಸೆಟ್ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಬಾಲಿವುಡ್ ನಟ ನವಾಬ್ ಶಾ ಕಾಂಬಿನೇಷನ್ನ ಚಿತ್ರೀಕರಣ ನಡೆಯುತ್ತಿದೆ. ಹಿಂದಿ, ತೆಲುಗು, ಸಿನಿಮಾಗಳಲ್ಲಿ ಖಳ ನಟನಾಗಿ ಮಿಂಚಿರುವ ನವಾಬ್ ಶಾ ಕಬ್ಜ ಚಿತ್ರದಲ್ಲಿ ಡಾನ್ ಪಾತ್ರ ಮಾಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಆರ್.ಚಂದ್ರು, ಉಪೇಂದ್ರ ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಬ್ ಶಾ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು. ಅಲ್ಲದೇ, ಉಪೇಂದ್ರ ಅವರ ಸಪೋರ್ಟ್ನಿಂದಾಗಿ ದೊಡ್ಡ ಮಟ್ಟದಲ್ಲಿ ಈ ಸಿನಿಮಾ ಮಾಡೋದಕ್ಕೆ ಸಾಧ್ಯವಾಯಿತು ಎಂದರು.
ಚಿತ್ರದಲ್ಲಿ ಐ ಚಿತ್ರ ಖ್ಯಾತಿಯ ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗಪತ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಸುಬ್ಬರಾಜು ತಾರಾಗಣವಿದೆ.
ಎಂಟಿಬಿ ನಾಗರಾಜ್ ಅರ್ಪಿಸುವ ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ನಡಿ ತಯಾರಾಗುತ್ತಿರುವ ಚಿತ್ರ ಇದಾಗಿದೆ. ಆರ್ ಚಂದ್ರು ನಿರ್ದೇಶನದ ಜತೆಗೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ, ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನವಿದೆ.
ಇದನ್ನೂ ಓದಿ: 'ನಿನ್ನ ಸನಿಹಕೆ' ಸಿನಿಮಾ ನೋಡಿ ಅಣ್ಣಾವ್ರ ಮಕ್ಕಳು ಹೇಳಿದ್ದೇನು?
ಕಬ್ಜ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನ ಹೈದರಾಬಾದ್ ನಲ್ಲಿ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.